ಹುಬ್ಬಳ್ಳಿ: ನರಸಾಪುರ-ಹುಬ್ಬಳ್ಳಿ ಅಮರಾವತಿ ಎಕ್ಸ್ಪ್ರೆಸ್ ರೈಲಿನಲ್ಲಿ ಸಾಗಿಸುತ್ತಿದ್ದ ₹4.22 ಲಕ್ಷ ಮೌಲ್ಯದ 8 ಕೆ.ಜಿ 459 ಗ್ರಾಂ ಗಾಂಜಾವನ್ನು ರೈಲ್ವೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ರೈಲಿನ ಸಾಮಾನ್ಯ ಬೋಗಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ ಪೊಲೀಸರು, ಹುಬ್ಬಳ್ಳಿ ರೈಲು ನಿಲ್ದಾಣದ ಪ್ಲಾಟ್ಫಾರಂ 4ರಲ್ಲಿ ಬ್ಯಾಗ್ನಲ್ಲಿದ್ದ ಗಾಂಜಾ ವಶಪಡಿಸಿಕೊಂಡರು. ಈ ಬಗ್ಗೆ ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನಗರದ ಶಿಲ್ಪಾ ಹುಲ್ಲಂಬಿ (25) ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಅವರ ಅತ್ತೆ, ನಾದಿನಿ ಸೇರಿ ಮೂವರ ವಿರುದ್ಧ ಇಲ್ಲಿನ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿಲ್ಪಾ ಅವರು ನಾಲ್ಕು ವರ್ಷಗಳ ಹಿಂದೆ ಹನುಮಂತ ಎಂಬುವರನ್ನು ಮದುವೆಯಾಗಿದ್ದರು. ವರದಕ್ಷಿಣೆಗಾಗಿ ಅವರ ಅತ್ತೆ ಕಿರುಕುಳ ಕೊಡುತ್ತಿದ್ದರು ಎಂದು ಶಿಲ್ಪಾ ಅವರ ತಾಯಿ ಸುಜಾತಾ ಪಾಟೀಲ ದೂರಿನಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-24-1330056980

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.