ಹುಬ್ಬಳ್ಳಿ: ‘ಗ್ರಾಮೀಣ ಮತ್ತು ನಗರ ಪ್ರದೇಶದ ಬಡವರಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರವು ಹಲವು ಆರೋಗ್ಯ ಯೋಜನೆಗಳನ್ನು ಅನುಷ್ಠಾನ ಮಾಡಿದೆ’ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ನಗರದ ಕಮರಿಪೇಟೆ ಎಸ್ಎಸ್ಕೆ ಪಂಚ ಕಮಿಟಿ, ಜಯಪ್ರಿಯ ಆಸ್ಪತ್ರೆ, ವಿಕೇರ್ ಮಲ್ಟಿ ಆಸ್ಪತ್ರೆಗಳ ಸಹಯೋಗ ಹಾಗೂ ಪ್ರಕಾಶ್ ಬುರಬುರೆ ಗೆಳೆಯರ ಬಳಗದ ವತಿಯಿಂದ ಇಲ್ಲಿನ ಕಮರಿಪೇಟೆ ಕರಿಯಮ್ಮ ಸಭಾಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ‘ಎಲ್ಲರಿಗೂ ಕೈಗೆಟುಕುವ ದರದಲ್ಲಿ ಉತ್ತಮ ಚಿಕಿತ್ಸೆ ಸಿಗಬೇಕು ಎಂಬುದು ಸರ್ಕಾರದ ಗುರಿ. ಈ ನಿಟ್ಟಿನಲ್ಲಿ ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಇಂತಹ ಆರೋಗ್ಯ ಉಚಿತ ತಪಾಸಣಾ ಶಿಬಿರಗಳು ಬಡವರಿಗೆ ಹೆಚ್ಚು ಸಹಕಾರಿಯಾಗಿವೆ’ ಎಂದು ಹೇಳಿದರು.

ಹು–ಧಾ ಮಹಾನಗರ ಪಾಲಿಕೆ ಸದಸ್ಯೆ ಸುನೀತಾ ಪ್ರಕಾಶ ಬುರಬುರೆ, ಮೋತಿಲಾಲಸಾ ಕಬಾಡೆ, ವಿಠ್ಠಲಸಾ ಲದ್ವಾ, ಕಾಶೀನಾಥ ಖೋಡೆ, ಮಂಜುನಾಥ ಪಟ್ಟಣ, ರಂಗನಾಥ ಜರತಾರಘರ, ಮಲ್ಲಾರಿ ಹಬೀಬ್, ಡಾ.ವಿವೇಕ ಪಾಟೀಲ್, ಡಾ.ಅಮರಜಿತ್, ಭಾರತೀ ಬದ್ದಿ, ಸುಭಾಸ ಬಳಗಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-24-1548689713

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.