ಹುಬ್ಬಳ್ಳಿ: ನಗರದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದ್ದು, 38ರಿಂದ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ. ಹೀಗಾಗಿ, ರಕ್ತ ನೀಡಿದರೆ ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ರಕ್ತ ಕೊಡಲು ದಾನಿಗಳು ಹಿಂದೇಟು ಹಾಕುತ್ತಿದ್ದಾರೆ.

ಹುಬ್ಬಳ್ಳಿಯಲ್ಲಿ 16ಕ್ಕೂ ಹೆಚ್ಚು ಪ್ರಮುಖ ರಕ್ತನಿಧಿ ಕೇಂದ್ರಗಳಿವೆ. ಇವುಗಳಲ್ಲಿ ಸರ್ಕಾರಿ ಸ್ವಾಮ್ಯದ, ಚಾರಿಟಬಲ್ ಟ್ರಸ್ಟ್ ನಡೆಸುವ ಮತ್ತು ಖಾಸಗಿ ಆಸ್ಪತ್ರೆಗಳ ರಕ್ತನಿಧಿ ಕೇಂದ್ರಗಳು ಸೇರಿವೆ. ನಗರದ ರಾಷ್ಟ್ರೋತ್ಥಾನ ರಕ್ತನಿಧಿ ಭಂಡಾರದಲ್ಲಿ ಪ್ರತಿದಿನ 100ಕ್ಕೂ ಹೆಚ್ಚು ಯುನಿಟ್ ರಕ್ತ ಸಂಗ್ರಹವಾಗುತ್ತಿತ್ತು. ಮಾರ್ಚ್ನಿಂದ ದಿನಕ್ಕೆ 20ರಿಂದ 25 ಯುನಿಟ್ ರಕ್ತ ಮಾತ್ರ ಸಂಗ್ರಹವಾಗುತ್ತಿದೆ. ಉಳಿದ ರಕ್ತನಿಧಿ ಕೇಂದ್ರಗಳಲ್ಲೂ ಇದೇ ಸ್ಥಿತಿಯಿದ್ದು, ಬೇಡಿಕೆಗೆ ತಕ್ಕಷ್ಟು ರಕ್ತ ಪೂರೈಸಲು ಕೇಂದ್ರಗಳಿಂದ ಸಾಧ್ಯವಾಗುತ್ತಿಲ್ಲ.

‘ಕಾಲೇಜುಗಳಿಗೆ ಬೇಸಿಗೆ ರಜೆ ಇರುವುದರಿಂದ ವಿದ್ಯಾರ್ಥಿಗಳಿಂದ ರಕ್ತ ದೊರೆಯುತ್ತಿಲ್ಲ. ಬೇಸಿಗೆ ಸಮಯದಲ್ಲಿ ರಕ್ತದಾನ ಶಿಬಿರ ಆಯೋಜಿಸುವುದಿಲ್ಲ. ಅಲ್ಲದೆ, ಈ ಅವಧಿಯಲ್ಲಿ ರಕ್ತ ನೀಡಿದಾಗ, ಕನಿಷ್ಠ ಒಂದು ತಾಸು ವಿಶ್ರಾಂತಿ ಪಡೆಯಬೇಕು. ಇಲ್ಲದಿದ್ದರೆ ತಲೆ ಸುತ್ತು ಬರುವುದು, ಬಸವಳಿದು ಪ್ರಜ್ಞೆ ತಪ್ಪುವ ಸಾಧ್ಯತೆ ಇರುತ್ತದೆ. ಹೀಗಾಗಿ ರಕ್ತದಾನಕ್ಕೆ ಜನರು ಮುಂದೆ ಬರುತ್ತಿಲ್ಲ’ ಎಂದು ರಾಷ್ಟ್ರೋತ್ಥಾನ ರಕ್ತನಿಧಿ ಕೇಂದ್ರದ ಟ್ರಸ್ಟಿ ದತ್ತಮೂರ್ತಿ ಕುಲಕರ್ಣಿ ಹೇಳಿದರು.

‘ಪ್ರತಿ ವರ್ಷ ಬೇಸಿಗೆ ಸಮಯದಲ್ಲಿ ರಕ್ತದ ಕೊರತೆ ಉಂಟಾಗುತ್ತದೆ. ಆದರೆ, ಪ್ರಸ್ತುತ ವರ್ಷ ಇದು ತೀವ್ರವಾಗಿದೆ. ತುರ್ತು ಸಂದರ್ಭದಲ್ಲಿ ರಕ್ತ ಬೇಕೆಂದು ಬರುವ ರೋಗಿಯ ಸಂಬಂಧಿಕರಿಗೆ, ಬೇಕಾದ ವರ್ಗದ ರಕ್ತ ನೀಡಲು ಸಾಧ್ಯವಾಗುತ್ತಿಲ್ಲ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-24-2060088695

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.