ಹುಬ್ಬಳ್ಳಿ: ‘ಅನ್ಯಧರ್ಮೀಯರ ದಾಳಿ ಯಿಂದ ಹಿಂದುತ್ವಕ್ಕೆ ಧಕ್ಕೆಯಾಗುತ್ತಿದ್ದು,ರಕ್ಷಣೆಗೆ ಸಂಘಟನಾತ್ಮಕ ಹೋರಾಟ ಅವಶ್ಯ’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.

ನಗರದಲ್ಲಿ ಶನಿವಾರ ಬಿಜೆಪಿ ಹುಬ್ಬಳ್ಳಿ– ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವತಿಯಿಂದ ಪಂಡಿತ್ ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಮತ್ತು ಮಂಡಲ ಮಟ್ಟದ ಪ್ರಶಿಕ್ಷಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಹಿಂದುತ್ವದ ರಕ್ಷಣೆಗೆ ಎಲ್ಲರೂ ಜೊತೆಗೂಡಿ ಹೋರಾಡಬೇಕಿದೆ’ ಎಂದರು.

‘ಮೂರು ವರ್ಷಕ್ಕೊಮ್ಮೆ ಪಕ್ಷದ ಪದಾಧಿಕಾರಿಗಳ ಬದಲಾವಣೆ, ಹೊಸ ಸೇರ್ಪಡೆ ಪ್ರಕ್ರಿಯೆ ನಡೆಯುತ್ತದೆ.ಕಾರ್ಯಕರ್ತರು ಪಕ್ಷದ ತತ್ವ ಸಿದ್ಧಾಂತವನ್ನು ಅಧ್ಯಯನ ಮಾಡಬೇಕು. ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಮಾಡಬೇಕು’ ಎಂದರು.

ಹು–ಧಾ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಅವರು, ‘ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳಲ್ಲಿ ಸಂಘಟನೆ ಮೂಡಿಸುವುದು ಹಾಗೂ ಅವರ ವ್ಯಕ್ತಿತ್ವ ವಿಕಸನ ಮಾಡುವುದು ಈ ಕಾರ್ಯಕ್ರಮದ ಉದ್ದೇಶ’ ಎಂದರು.

ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕೌತಾಳ, ಮಂಡಲ ಅಧ್ಯಕ್ಷ ಮಂಜುನಾಥ ಕಾಟಕರ್, ಧಾರವಾಡ ವಿಭಾಗದ ಪ್ರಶಿಕ್ಷಣ ಸಹ– ಸಂಯೋಜಕ ಶ್ರೀಪತಿ ಉಡುಪಿ ಮಾತನಾಡಿದರು.

ಪಕ್ಷದ ಮುಖಂಡರಾದ ಅಶೋಕ ಕಾಟವೆ, ಬೋಜರಾಜ ಕರೋದಿ, ಚಂದ್ರಶೇಖರ ಗೋಕಾಕ, ನಾರಾಯಣ ಜರತಾರಘರ, ರಾಧಾಬಾಯಿ ಸಫಾರೆ, ಶಾಂತಾ ಹಿರೇಮಠ, ಶೀಲಾ ಎಂ.ಕಾಟಕರ, ಶಿವು ಮೆಣಸಿನಕಾಯಿ ಮತ್ತು ಪ್ರವೀಣ ಕುಬಸದ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-24-1362035714

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.