ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ವತಿಯಿಂದ ಇಲ್ಲಿನ ಅಮರಗೋಳದ ಎಪಿಎಂಸಿ ಆವರಣದಲ್ಲಿರುವ ವಿವಿಧೋದ್ದೇಶ ವಸ್ತು ಪ್ರದರ್ಶನ ಕೇಂದ್ರದಲ್ಲಿ ಏ.25ರಿಂದ 29ರವರೆಗೆ ‘ಇನ್ಕಾಮೆಕ್ಸ್–2026’ ಬೃಹತ್ ಕೈಗಾರಿಕಾ ಮತ್ತು ವಾಣಿಜ್ಯ ವಸ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ರಾಜ್ಯ ಮತ್ತು ಕೇಂದ್ರ ಸರ್ಕಾರದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಸಹಯೋಗದಲ್ಲಿ ಐದು ದಿನ ನಡೆಯಲಿರುವ ಈ ಪ್ರದರ್ಶನದಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಕೈಗಾರಿಕೆಗಳು ಪಾಲ್ಗೊಳ್ಳಲಿವೆ.

‘ಏ. 25ರಂದು ಸಂಜೆ 4ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಪಿಯೂಷ್ ಗೋಯಲ್, ಕೆ. ರಾಮಮೋಹನ ನಾಯ್ಡು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ಇನ್ಕಾಮೆಕ್ಸ್ ಅಧ್ಯಕ್ಷ ಮಹಾದೇವ ಕರಮರಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಎಂ.ಬಿ. ಪಾಟೀಲ, ಎಚ್.ಕೆ. ಪಾಟೀಲ ಮತ್ತು ಸಂತೋಷ ಲಾಡ್ ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ಟಾಟಾ ಪ್ರಾಜೆಕ್ಟ್ ವ್ಯವಸ್ಥಾಪಕ ನಿರ್ದೇಶಕ ವಿನಾಯಕ ಪೈ ಮುಖ್ಯ ಭಾಷಣ ಮಾಡಲಿದ್ದಾರೆ. ಸಂಸದರಾದ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ಸ್ಥಳೀಯ ಶಾಸಕರು ಹಾಗೂ ಗಣ್ಯರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ಜೆಎಸ್ಡಬ್ಲ್ಯೂ ಗ್ರೂಪ್ ಚೇರ್ಮನ್ ಸಜ್ಜನ್ ಜಿಂದಾಲ್ ಮತ್ತು ಕೆಎಲ್ಇ ಸೊಸೈಟಿ ಗೌರವ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರಿಗೆ ‘ಜೀವಮಾನ ಸಾಧನೆ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು’ ಎಂದರು.

‘1996ರಲ್ಲಿ ಮೊದಲ ಬಾರಿಗೆ ಇನ್ಕಾಮೆಕ್ಸ್ ಆಯೋಜಿಸಲಾಗಿತ್ತು. ಇದು 5ನೇ ಇನ್ಕಾಮೆಕ್ಸ್ ವಸ್ತು ಪ್ರದರ್ಶನವಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕೋದ್ಯಮಿಗಳಿಗೆ ಪ್ರೋತ್ಸಾಹಿಸುವುದು ಹಾಗೂ ವೇದಿಕೆ ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ. ಪ್ರಸ್ತುತ ವರ್ಷದ ಪ್ರದರ್ಶನದಲ್ಲಿ 300ಕ್ಕೂ ಹೆಚ್ಚು ಪ್ರದರ್ಶಕರು ಪಾಲ್ಗೊಳ್ಳಲಿದ್ದಾರೆ. ಎಚ್ಎಎಲ್, ಬಿಎಚ್ಇಎಲ್, ಬಿಇಎಂಎಲ್, ಎನ್ಪಿಸಿಎಲ್, ಎನ್ಪಿಸಿಐಎಲ್, ಗೋವಾ ಶಿಪ್ಯಾರ್ಡ್, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳು, ನವೋದ್ಯಮಗಳು ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳು ಭಾಗವಹಿಸಲಿವೆ. 2 ಲಕ್ಷಕ್ಕೂ ಹೆಚ್ಚು ಮಂದಿ ಭೇಟಿ ನೀಡುವ ನಿರೀಕ್ಷೆಯಿದೆ’ ಎಂದರು.

ಕೆಸಿಸಿಐ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ, ಪದಾಧಿಕಾರಿಗಳಾದ ಪ್ರವೀಣ ಅಂಗಡಿ, ಸಿದ್ದೇಶ್ವರ ಕಮ್ಮಾರ, ವೀರಣ್ಣ ಕಲ್ಲೂರ, ಉದಯ ರೇವಣಕರ, ಪ್ರಕಾಶ ಶೃಗೇರಿ, ಜಯಪ್ರಕಾಶ ಟೆಂಗಿನಕಾಯಿ, ವಸಂತ ಲದ್ದಡ, ಶಶಿಧರ ಶೆಟ್ಟರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-24-739219620

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.