ಹುಬ್ಬಳ್ಳಿ: ನಗರದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಇಲ್ಲಿನ ಕನ್ನಡ ಹೋರಾಟಗಾರರ ಸಮಿತಿಯ ಪ್ರಮುಖರು ಬಾಯಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪಾಲಿಕೆ ಕಚೇರಿ ಎದುರು ಶುಕ್ರವಾರ ಮೌನ ಧರಣಿ ನಡೆಸಿ, ಮೇಯರ್ ಜ್ಯೋತಿ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.

ನಗರದಲ್ಲಿ ಜನಸಂಖ್ಯೆ ಹೆಚ್ಚು ಇದೆ. ನಿತ್ಯ ಸಾವಿರಾರು ಜನರು ನಗರಕ್ಕೆ ಬಂದು ಹೋಗುತ್ತಿದ್ದಾರೆ. ಆದರೆ, ಜನಸಂಖ್ಯೆಗೆ ತಕ್ಕಂತೆ ಸಾರ್ವಜನಿಕ ಶೌಚಾಲಯಗಳಿಲ್ಲ. ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಇಲ್ಲಿನ ಸಾಂಸ್ಕೃತಿಕ ಭವನ ಹಾಗೂ ರಂಗಮಂದಿರ ಕಟ್ಟಡ ಹಾಳಾಗಿದ್ದು, ಅವುಗಳ ದುರಸ್ತಿಗೆ ಕ್ರಮ ವಹಿಸಬೇಕು. ಪಾಲಿಕೆ ಆವರಣದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು.

ನಗರದ ಹಲವೆಡೆ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಲಾಗಿದ್ದು, ಪಾದಚಾರಿಗಳಿಗೆ ಹಾಗೂ ವಾಹನ ಸವಾರರ ಸಂಚಾರಕ್ಕೆ ತೊಂದರೆಯಾಗಿದೆ. ಕೂಡಲೇ ಒತ್ತುವರಿ ಮಾರ್ಗ ತೆರವುಗೊಳಿಸಬೇಕು.

ನಗರದ ಉದ್ಯಾನಗಳು ಹಾಳಾಗಿದ್ದು, ಅವುಗಳ ಸೌಂದರ್ಯೀಕರಣಕ್ಕೆ ಕ್ರಮವಹಿಸಬೇಕು. ಹಾಳಾಗಿರುವ ರಸ್ತೆಗಳ ದುರಸ್ತಿ ಮಾಡಬೇಕು. ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಬೇಗ ಮುಗಿಸಬೇಕು’ ಎಂದು ಮನವಿ ಪತ್ರದ ಮೂಲಕ ಆಗ್ರಹಿಸಿದರು.

ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ನಿಯೋಗವು ಈಚೆಗೆ ಸೂರತ್, ಮುಂಬೈ ಹಾಗೂ ಇಂದೂರ್ ಸ್ವಚ್ಛತಾ ಅಧ್ಯಯನ ಪ್ರವಾಸ ನಡೆಸಿತು. ಆದರೂ ನಗರದಲ್ಲಿ ಮೂಲಸೌಕರ್ಯ, ಸ್ವಚ್ಛತೆ ಇಲ್ಲವಾಗಿದೆ ಎಂದು ಟೀಕಿಸಿದರು.

ಸಮಿತಿಯ ಪ್ರಮುಖರಾದ ಶೇಖರಯ್ಯ ಮಠಪತಿ, ವೀರೇಶ ಜಗಳೂರು, ಈರಪ್ಪ ಯಮ್ಮಿ, ರಮೇಶ ಹಳ್ಳಿಕೆರೆ, ಮೌನೇಶ ಅಂಬಿಗೇರ, ಪ್ರಕಾಶ ನಾಯ್ಕ, ಸಂಜೀವ ದುಮಕನಾಳ ಸೇರಿದಂತೆ ಹಲವರು ಧರಣಿಯಲ್ಲಿ ಭಾಗಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-24-688053865

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.