ಹುಬ್ಬಳ್ಳಿ: ‘ನಗರದ ಕೆಜಿಪಿ ಫೌಂಡೇಶನ್ ವತಿಯಿಂದ ಇಲ್ಲಿನ ವಿದ್ಯಾನಗರದ ಕೆಎಲ್ಇ ಸಂಸ್ಥೆಯ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮೇ 31ರಂದು ಬೆಳಿಗ್ಗೆ 9ರಿಂದ ಸಂಜೆ 4ರ ತನಕ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ’ ಎಂದು ಫೌಂಡೇಶನ್ನ ಪ್ರಮುಖ ರಾಜುಪಾಟೀಲ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಫೌಂಡೇಶನ್ ಅಧ್ಯಕ್ಷ ಶ್ರೀಗಂಧ ಗಣೇಶ ಶೇಟ್ ಅವರ ನೇತೃತ್ವದಲ್ಲಿ 2ನೇ ಬಾರಿಗೆ ರಾಜ್ಯಮಟ್ಟದ ಈ ಉದ್ಯೋಗ ಮೇಳ ಆಯೋಜಿಸಲಾಗಿದೆ. ರಾಜ್ಯದ ವಿವಿಧೆಡೆಯಿಂದ 100ಕ್ಕೂ ಹೆಚ್ಚು ಕಂಪನಿಗಳ ಪ್ರಮುಖರು ಮೇಳದಲ್ಲಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

‘ಎಸ್ಎಸ್ಎಲ್ಸಿ, ಪಿಯುಸಿ, ಯಾವುದೇ ಪದವಿ ಹಾಗೂ ಡಿಪ್ಲೊಮಾ ಕೋರ್ಸ್ ಅಧ್ಯಯನ ಮಾಡಿದ ಯುವಕ, ಯುವತಿಯರು ಶೈಕ್ಷಣಿಕ ದಾಖಲೆಗಳೊಂದಿಗೆ ಭಾಗವಹಿಸಬಹುದು. 3 ಸಾವಿರಕ್ಕೂ ಅಧಿಕ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ. 900ಕ್ಕೂ ಅಧಿಕ ಅಭ್ಯರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ವಿಕಲಚೇತನರೂ ಸಹ ಭಾಗವಹಿಸಬಹುದು‘ ಎಂದು ಹೇಳಿದರು.

‘ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಪ್ರಸಾದ ಅಬ್ಬಯ್ಯ, ಕೆಎಲ್ಇ ಸಂಸ್ಥೆಯ ನಿರ್ದೇಶಕ ಮಂಜುನಾಥ ಮುನವಳ್ಳಿ ಅವರು ಮೇಳದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು‘ ಎಂದು ತಿಳಿಸಿದರು.

ನಾಗರಾಜ ಸೋಗಿ, ವಿನಾಯಕ ಕಿತ್ತೂರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-24-1058329380

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.