ಹುಬ್ಬಳ್ಳಿ: ಕೆಎಲ್ಇ ಸಂಸ್ಥೆಯ ಗುರುಸಿದ್ಧಪ್ಪ ಕೋತಂಬ್ರಿ ಕಾನೂನು ಮಹಾವಿದ್ಯಾಲಯದಲ್ಲಿ ಮಂಗಳವಾರ ‘ವೃತ್ತಿ ಮಾರ್ಗದರ್ಶನದ’ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ನಗರದ ಪ್ರಧಾನ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶೆ ವೀಣಾ ಮಲ್ಲನಾಯ್ಕ್ ನಾಯ್ಕರ್ ಅವರು, ‘ವಿದ್ಯಾರ್ಥಿಗಳು ಶ್ರದ್ಧೆ, ಬದ್ಧತೆಯಿಂದ ಪ್ರಾಮಾಣಿಕವಾಗಿ ಓದಿದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು’ ಎಂದು ಸಲಹೆ ನೀಡಿದರು.

‘ನ್ಯಾಯಾಂಗದಲ್ಲಿ ವೃತ್ತಿಜೀವನ’ ವಿಷಯ ಕುರಿತು ನಿವೃತ್ತ ಸಿವಿಲ್ ನ್ಯಾಯಾಧೀಶ ಸುಭಾಷ್ಚಂದ್ರ ರಾಥೋಡ್, ‘ಸುಪ್ರೀಂ ಕೋರ್ಟ್ನಲ್ಲಿ ವಕೀಲಿಕೆ ಮತ್ತು ಸವಾಲುಗಳು’ ವಿಷಯ ಕುರಿತು ಸುಪ್ರೀಂ ಕೋರ್ಟ್ ವಕೀಲ ಶ್ರೀನಾಥ್ ಶ್ರೀನಿವಾಸನ್, ‘ಅಖಿಲ ಭಾರತ ವಕೀಲರ ಪರೀಕ್ಷೆ–ಕಾನೂನು ವೃತ್ತಿಗೆ ಹೆಬ್ಬಾಗಿಲು’ ವಿಷಯ ಕುರಿತು ಮಹಾವಿದ್ಯಾಲಯದ ಉಪನ್ಯಾಸಕಿ ಸ್ನೇಹಾ ಬಿ.ಕಡ್ರೊಳ್ಳಿ ಮಾತನಾಡಿದರು.

ಮಹಾವಿದ್ಯಾಲಯದ ಪ್ರಾಚಾರ್ಯ ಜ್ಞಾನೇಶ್ವರ್ ಪಿ. ಚೌರಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಒಕ್ಕೂಟದ ಕಾರ್ಯಾಧ್ಯಕ್ಷ ಜೈಹನುಮಾನ್ ಎಚ್.ಕೆ. ಮತ್ತು ಐಕ್ಯೂಎಸಿ ಸಂಯೋಜಕಿ ಶಾರದಾ ಜಿ. ಪಾಟೀಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-24-35480985

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.