ಹುಬ್ಬಳ್ಳಿ: ತಾಲ್ಲೂಕಿನ ಕೋಳಿವಾಡ ಗ್ರಾಮದಲ್ಲಿರುವ ಬಸ್ ತಂಗುದಾಣ ಶಿಥಿಲಗೊಂಡಿದ್ದು, ಕುಸಿದು ಬಿದ್ದು, ಅಪಾಯ ಸಂಭವಿಸುವ ಸಾಧ್ಯತೆ ಇದೆ.

1986ರಲ್ಲಿ ತಂಗುದಾಣವನ್ನು ನಿರ್ಮಿಸಲಾಗಿದೆ. ಈಗ ಅದು ಸಂಪೂರ್ಣವಾಗಿ ಶಿಥಿಲಗೊಂಡಿದೆ. ಜನರು ಅದರ ಒಳಗೆ ಹೋಗಲು ಭಯಪಡುವಂತಾಗಿದೆ. ಆದರೆ, ಸಂಬಂಧಪಟ್ಟ ಅಧಿಕಾರಿಗಳು ಇದರ ಪುನರ್ನಿರ್ಮಾಣಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಗ್ರಾಮಸ್ಥರ ದೂರು.

ತಂಗುದಾಣ ಹಾಳಾಗಿರುವುದರಿಂದ ಮಹಿಳೆಯರು, ಮಕ್ಕಳು ಹಾಗೂ ವೃದ್ಧರಿಗೆ ತೀವ್ರ ತೊಂದರೆಯಾಗುತ್ತಿದ್ದು, ಮಳೆ, ಬಿಸಿಲಿನಲ್ಲೇ ನಿಂತು ಬಸ್ಗಾಗಿ ಕಾಯಬೇಕಾದ ಸ್ಥಿತಿ ಇದೆ. ಅನಾಹುತ ಸಂಭವಿಸುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಂಡು ತಂಗುದಾಣವನ್ನು ಪುನರ್ನಿರ್ಮಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ತಂಗುದಾಣ ಪುನರ್ ನಿರ್ಮಾಣಕ್ಕೆ ಅಗತ್ಯವಿರುವಷ್ಟು ಅನುದಾನ ಗ್ರಾಮ ಪಂಚಾಯಿತಿಯಲ್ಲಿ ಲಭ್ಯವಿಲ್ಲ. ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಅಥವಾ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಅನುದಾನದಲ್ಲಿ ನಿರ್ಮಿಸಬೇಕು’ ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳು ತಿಳಿಸಿದರು.

‘ಹೊಸ ತಂಗುದಾಣ ನಿರ್ಮಾಣಕ್ಕೆ ಕೆಲ ತಿಂಗಳ ಹಿಂದೆ ಮೇಲಧಿಕಾರಿಗಳಿಗೆ ಪ್ರಸ್ತಾವ ಸಲ್ಲಿಸಲಾಗಿದೆ. ಈಗಿರುವ ತಂಗುದಾಣ ಚಿಕ್ಕದಾಗಿದ್ದು, ಬೇರೆ ಕಡೆ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-24-507949429

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.