ಹುಬ್ಬಳ್ಳಿ: ‘ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿ (ಕುಪ್ಮಾ)ಯ ಧಾರವಾಡ ಜಿಲ್ಲಾ ಸಂಘಟನೆ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಾರ್ಚ್ 30ರಂದು ಬೆಳಿಗ್ಗೆ 10.30ಕ್ಕೆ ನಗರದ ಸವಾಯಿ ಗಂಧರ್ವ ಕಲಾಭವನದಲ್ಲಿ ನಡೆಯಲಿದೆ’ ಎಂದು ಜಿಲ್ಲಾ ಘಟಕದ ಅಧ್ಯಕ್ಷ ವಿಶ್ವನಾಥ ಕೊರವಿ ಹೇಳಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾರಂಭವನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸಲಿದ್ದು, ರಾಜ್ಯ ಸಮಿತಿ ಅಧ್ಯಕ್ಷ ಮೋಹನ ಆಳ್ವ, ಕಾರ್ಯದರ್ಶಿ ಪ್ರೊ. ನರೇಂದ್ರ ನಾಯಕ್, ಧಾರವಾಡ ಜಿಲ್ಲಾ ಡಿಡಿಪಿಯು ತೇಜಸ್ವಿನಿ ನಾರಾಯಣಕರ್, ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತಪ್ಪ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ’ ಎಂದರು.

‘ಧಾರವಾಡ ಜಿಲ್ಲೆಯ 120 ಪಿಯು ಖಾಸಗಿ ಶಿಕ್ಷಣ ಸಂಸ್ಥೆಗಳು ಸಮಿತಿಯ ಸದಸ್ಯತ್ವ ಪಡೆದಿವೆ’ ಎಂದು ಹೇಳಿದರು.

ನೂರ್ ಅಹ್ಮದ್ ಧಾರವಾಡ, ಜಿ.ವಿ. ವಳಸಂಗ, ಮಲ್ಲಿಕಾರ್ಜುನ ಸಾವಿಕಾರ, ನಾಗೇಶ ಅಣ್ಣಿಗೇರಿ, ಜನಾಬ್ ಅಯೂಬ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-24-727383296

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.