ಹುಬ್ಬಳ್ಳಿ: ಲವ್ ಜಿಹಾದ್ಗೆ ಯತ್ನ ಆರೋಪದ ಹಿನ್ನೆಲೆಯಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕನ ಕುಟುಂಬಸ್ಥರ ಮಧ್ಯೆ ಜಗಳ ನಡೆದು ಶುಕ್ರವಾರ ಅಶೋಕನಗರ ಹಾಗೂ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು– ಪ್ರತಿದೂರು ದಾಖಲಾಗಿದೆ.

‘ಸಮೀರ್ ಎಂಬುವರು ಜಿಮ್ನಲ್ಲಿ ಯುವತಿ ಜೊತೆ ಸಲುಗೆ ಬೆಳೆಸಿ ಲವ್ ಜಿಹಾದ್ಗೆ ಯತ್ನಿಸಿದ್ದಾರೆ’ ಎಂದು ಯುವತಿಯ ಪಾಲಕರು ಆರೋಪಿಸಿದರೆ, ಸಮೀರ್ ಕುಟುಂಬಸ್ಥರು ಇದನ್ನು ನಿರಾಕರಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿ, ‘ಸಮೀರ್ ಕುಟುಂಬಸ್ಥರು ತಲ್ವಾರ್ ಹಿಡಿದು ನಮ್ಮ ಮನೆಗೆ ಏಕಾಏಕಿ ನುಗ್ಗಿ, ಹಲ್ಲೆ ನಡೆಸಿದ್ದಾರೆ. ಪೆಟ್ರೋಲ್ ಸುರಿದು ಕೊಲೆ ಮಾಡುತ್ತೇವೆ ಎಂದು ಜೀವ ಬೆದರಿಕೆ ಹಾಕಿದ್ದಾರೆ’ ಎಂದು ಯುವತಿಯ ತಾಯಿ ಆರೋಪಿಸಿದರು.

‘ನನ್ನ ಸಹೋದರ ಸಮೀರ್ ಹಾಗೂ ಯುವತಿಯು ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಅವಳು ನಮ್ಮೊಂದಿಗೆ ಸಭೆ, ಸಮಾರಂಭ, ಪಾರ್ಟಿಗಳಿಗೆ ಬಂದಿದ್ದಾಳೆ. ಯುವತಿಯ ಕುಟುಂಬಸ್ಥರು ನಮ್ಮೊಂದಿಗೆ ಅನ್ಯೋನ್ಯವಾಗಿದ್ದರು. ಶುಕ್ರವಾರ ಬೆಳಿಗ್ಗೆ ಯುವತಿ ಕುಟುಂಬಸ್ಥರು ನಮ್ಮ ಮನೆಗೆ ನುಗ್ಗಿ ಸಮೀರ್ನನ್ನು ಹಲ್ಲೆ ಮಾಡಿ, ಅಪಹರಿಸಿದ್ದಾರೆ’ ಎಂದು ಸಮೀರ್ ಸಹೋದರಿ ಆರೋಪಿಸಿದರು.

ಈ ನಡುವೆ ಹಿಂದುತ್ವ ಸಂಘಟನೆಗಳ ಕಾರ್ಯಕರ್ತರು ಹಳೇಹುಬ್ಬಳ್ಳಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಸಮೀರ್ಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು. ‘ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು’ ಎಂದು ಪೊಲೀಸರು ತಿಳಿಸಿದ ಬಳಿಕ ಪ್ರತಿಭಟನೆ ಹಿಂಪಡೆದರು.

ಸಮೀರ್ನನ್ನು ವಶಕ್ಕೆ ಪಡೆದಿರುವ ಪೊಲೀಸರು, ಗಾಯಗೊಂಡಿರುವ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಕೆಎಂಸಿ–ಆರ್ಐ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-24-1042643485

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.