ಹುಬ್ಬಳ್ಳಿ: ‘ಎಸ್ಎಸ್ಕೆ ಗೋಕುಲ ರೋಡ್ ಮಿತ್ರ ಮಂಡಳ ವತಿಯಿಂದ ಇಲ್ಲಿಯ ರವಿನಗರದ ಗಣಪತಿ ದೇವಸ್ಥಾನದ ಆವರಣದಲ್ಲಿ ಮೇ 7ರಂದು ಸಾಮೂಹಿಕ ಉಪನಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಮಿತ್ರ ಮಂಡಳದ ಪಂಚ ಸಮಿತಿ ಅಧ್ಯಕ್ಷ ರಮೇಶ ಬುರಬುರೆ ಹೇಳಿದರು.

‘ಅಂದು ಬೆಳಿಗ್ಗೆ 11.30ಕ್ಕೆ ಅಖಿಲ ಭಾರತ ಎಸ್ಎಸ್ಕೆ ಸಮಾಜದ ಅಧ್ಯಕ್ಷ ಸ್ವಾಮಿ ಖೋಡೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಥಣಿಯ ರಾಮ ಕುಟೀರ ಆಶ್ರಮದ ತಾರಾಚಂದ ಮಹಾರಾಜ ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಸಂಸದ ಜಗದೀಶ ಶೆಟ್ಟರ್, ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಸಮಾಜದ ಮುಖಂಡರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘14 ವರ್ಷಗಳಿಂದ ಪ್ರತಿ ಎರಡು ವರ್ಷಕ್ಕೊಮ್ಮೆ ಸಾಮೂಹಿಕ ಉಪನಯನ ಕಾರ್ಯಕ್ರಮ ಆಯೋಜಿಸುತ್ತ ಬಂದಿದ್ದೇವೆ. ಇದು ಏಳನೇ ವರ್ಷದ ಕಾರ್ಯಕ್ರಮವಾಗಿದ್ದು, ಈಗಾಗಲೇ 180 ವಟುಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿನಿಂದಲೂ ಸಮಾಜದ ಜನರು ಬರಲಿದ್ದು, ಸುಮಾರು 15 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ’ ಎಂದರು.

ನಾರಾಯಣ ಖೋಡೆ, ರಾಜೇಶ ಜರತಾರಘರ, ಸಂತೋಷ ಕಾಟವೆ, ಶಂಕರ ಮಿಸ್ಕಿನ್ ಮತ್ತು ರಾಜೇಶ ಹಬೀಬ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-24-1348017735

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.