‘ಗೋಕುಲ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿ 40 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ. ಬೀದಿ ದೀಪ ನೀರು ಚರಂಡಿ ಮೂತ್ರಾಲಯ ಮೊದಲಾದ ಮೂಲಸೌಕರ್ಯಗಳನ್ನು ಕಲ್ಪಿಸಿಲ್ಲ. ಪ್ರತಿ ವರ್ಷ ತೆರಿಗೆ ಪಾವತಿಸಿದರೂ ಸೌಲಭ್ಯದಿಂದ ವಂಚಿತರಾಗಿದ್ದೇವೆ’ ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ರಮೇಶ ಪಾಟೀಲ ಹೇಳಿದರು.