ಹುಬ್ಬಳ್ಳಿ: ಪರಮಪೂಜ್ಯ ಶ್ರೀ ಸಿದ್ಧೇಶ್ವರ ಮಹಾಸ್ವಾಮೀಜಿಯವರ ಸತ್ಸಂಗ ಹಾಗೂ ದಾಸೋಹ ಸೇವಾ ಸಮಿತಿ ವತಿಯಿಂದ ನವನಗರದ ಈಶ್ವರ ದೇವಸ್ಥಾನದಲ್ಲಿ ಡಿ.29ರಿಂದ ಜ.2ರವರೆಗೆ ಸಿದ್ಧೇಶ್ವರ ಸ್ವಾಮೀಜಿ ಗುರುನಮನ ಹಾಗೂ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅಂದು ಸಂಜೆ 6 ಗಂಟೆಗೆ ಶಾಸಕ ಅರವಿಂದ ಬೆಲ್ಲದ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೆಎಲ್ಇ ಸಂಸ್ಥೆಯ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಹು–ಧಾ ಮಹಾನಗರ ಪಾಲಿಕೆ ಸದಸ್ಯೆ ಸುನಿತಾ ಮಾಳವಾದಕರ ಅತಿಥಿಗಳಾಗಿ ಪಾಲ್ಗೊಳ್ಳುವರು. ಧಾರವಾಡ ಮುರಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಡಿ.29ರಂದು ವಿಜಯಪುರದ ಸಿದ್ಧಲಿಂಗೇಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ, ಡಿ.30ರಂದು ಚಿತ್ರದುರ್ಗ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಸ್ವಾಮೀಜಿ, ಡಿ.31ರಂದು ಅಮ್ಮಿನಬಾವಿ ಸಂಸ್ಥಾನ ಪಂಚಗ್ರಹ ಹಿರೇಮಠದ ಅಭಿನವ ಶಾಂತಲಿಂಗ ಶಿವಾಚಾರ್ಯರು, ಜ. 1ರಂದು ಹುಬ್ಬಳ್ಳಿಯ ರುದ್ರಾಕ್ಷಿಮಠದ ಬಸವಲಿಂಗ ಸ್ವಾಮೀಜಿ ಆಶೀರ್ವಚನ ನೀಡುವರು.

ಜ.2ರಂದು ಮಹಾಮಂಗಳೋತ್ಸವ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉದ್ಯಮಿ ಎನ್.ಎನ್. ಶಿವಯೋಗಿಮಠ ಪಾಲ್ಗೊಳ್ಳುವರು. ಪ್ರತಿದಿನ ಸಂಜೆ 6.15ರಿಂದ 7.15ರವರೆಗೆ ಪ್ರವಚನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.