ಹುಬ್ಬಳ್ಳಿ: ದೇಶದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ನಡೆಸುವ ನೀಟ್ ಮಾದರಿ ಪರೀಕ್ಷೆಯನ್ನು ರದ್ದುಪಡಿಸಿ, ರಾಜ್ಯಮಟ್ಟದ ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಸಬೇಕು ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ಎಸ್ಯುಐ)ದ ವತಿಯಿಂದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ವಿದ್ಯಾನಗರದ ಬಿವಿಬಿ ಕಾಲೇಜು ಎದುರು ಒಕ್ಕೂಟದ ರಾಜ್ಯ ಕಾರ್ಯದರ್ಶಿ ವಿಶಾಲ ಮಾನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ಸರಿಯಾಗಿ ನಿರ್ವಹಿಸಲಾಗದೆ ಯುವ ಜನಾಂಗದ ಕನಸುಗಳನ್ನು ಭಗ್ನಗೊಳಿಸಿದೆ ಎಂದು ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಮಾನವ ಸಂಪನ್ಮೂಲ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ನೀಟ್ ಪರೀಕ್ಷಾ ಪದ್ಧತಿ ರದ್ದುಪಡಿಸಿ, ರಾಜ್ಯ ಸರ್ಕಾರವೇ ವೈದ್ಯಕೀಯ ಪ್ರವೇಶಕ್ಕಾಗಿ ಪ್ರತ್ಯೇಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಬೇಕು. ನೀಟ್ ಪರೀಕ್ಷೆಯು ವಿದ್ಯಾರ್ಥಿಗಳ ಮೇಲೆ ಮಾನಸಿಕ ಒತ್ತಡ ಹೇರುತ್ತಿದ್ದು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅನ್ಯಾಯಕ್ಕೆ ಒಳಗಾಗುತ್ತಿದ್ದಾರೆ’ ಎಂದು ವಿಶಾಲ ಮಾನೆ ಹೇಳಿದರು.

‘ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು ಮತ್ತು ಪಾರದರ್ಶಕತೆಯ ಕೊರತೆಗಳಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗುತ್ತಿದೆ. ಪರೀಕ್ಷಾ ಅಕ್ರಮಗಳು ಬೆಳಕಿಗೆ ಬಂದಾಗ ಮತ್ತು ವಿದ್ಯಾರ್ಥಿಗಳು ಆತಂಕದಲ್ಲಿದ್ದಾಗ ಅದಕ್ಕೆ ಉತ್ತರ ನೀಡಬೇಕಾದದ್ದು ಕೇಂದ್ರ ಸರ್ಕಾರದ ಜವಾಬ್ದಾರಿ. ರಾಜ್ಯದ ವಿದ್ಯಾರ್ಥಿಗಳ ಪರಿಸ್ಥಿತಿಗೆ ಅನುಗುಣವಾಗಿ ಪರೀಕ್ಷೆ ಹಾಗೂ ಪ್ರವೇಶ ವ್ಯವಸ್ಥೆ ರೂಪಗೊಳ್ಳಬೇಕು’ ಎಂದು ಆಗ್ರಹಿಸಿದರು.

ನಿಖಿಲ್ ಹಿರೇಮಠ, ಸುಮಾ, ಸೋಹೇಬ್, ರಾಜು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-24-65218646

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.