ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ನಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ಲ್ಯಾಪ್ಟಾಪ್ ಹಾಗೂ ಪ್ರಮುಖ ದಾಖಲೆಗಳಿದ್ದ ಬ್ಯಾಗ್ ಅನ್ನು ಅವರಿಗೆ ಹಿಂದಿರುಗಿಸುವ ಮೂಲಕ ನಿರ್ವಾಹಕ ಹಾಗೂ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ಖಾಸಗಿ ಫಾರ್ಮಸಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಹುಬ್ಬಳ್ಳಿಯ ರಮೇಶ ಕುಲಕರ್ಣಿ ಅವರು ಈಚೆಗೆ ಹುಬ್ಬಳ್ಳಿ ಗ್ರಾಮಾಂತರ 1ನೇ ಘಟಕದ ಬಸ್ನಲ್ಲಿ ಹಾವೇರಿಯಿಂದ ಹುಬ್ಬಳ್ಳಿಗೆ ಬಂದಿದ್ದರು. ಹುಬ್ಬಳ್ಳಿಯ ಗೋಕುಲ ರಸ್ತೆಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಇಳಿಯುವಾಗ ಲ್ಯಾಪ್ಟಾಪ್ ಹಾಗೂ ಪ್ರಮುಖ ದಾಖಲೆಗಳಿದ್ದ ಬ್ಯಾಗ್ ಅನ್ನು ಬಸ್ನಲ್ಲಿಯೇ ಬಿಟ್ಟು ಹೋಗಿದ್ದರು.

ಬಸ್ನ ನಿರ್ವಾಹಕ ರವಿ ಹುಬ್ಬಳ್ಳಿ, ಚಾಲಕ ಪಿ.ಆರ್.ಬರಡ್ಡಿ ಅವರು ಬ್ಯಾಗ್ ಅನ್ನು ಗಮನಿಸಿ, ಅದನ್ನು ಘಟಕದ ಮೇಲಧಿಕಾರಿಗಳಿಗೆ ನೀಡಿದ್ದರು. ವಿಭಾಗೀಯ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಲ್ಯಾಪ್ಟಾಪ್ ಹಾಗೂ ದಾಖಲೆಗಳಿದ್ದ ಬ್ಯಾಗ್ ಅನ್ನು ರಮೇಶ ಅವರಿಗೆ ನೀಡಲಾಯಿತು.

ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ, ನಿರ್ವಾಹಕ ರವಿ ಹುಬ್ಬಳ್ಳಿ ಹಾಗೂ ಚಾಲಕ ಪಿ.ಆರ್.ಬರಡ್ಡಿ ಅವರ ಪ್ರಾಮಾಣಿಕತೆ, ಪ್ರಯಾಣಿಕ ಸ್ನೇಹಿ ವರ್ತನೆ ಇತರ ನೌಕರರಿಗೆ ಮಾದರಿಯಾಗಿದೆ ಎಂದು ಶ್ಲಾಘಿಸಿದರು.

ವಿಭಾಗೀಯ ಸಂಚಾರ ಅಧಿಕಾರಿ ವೈ.ಎಂ. ಶಿವರೆಡ್ಡಿ ವಿಭಾಗೀಯ ತಾಂತ್ರಿಕ ಇಂಜಿನಿಯರ್ ದೀಪಕ ಜಾದವ, ಲೆಕ್ಕಪತ್ರ ಅಧಿಕಾರಿ ಮಹದೇವಸ್ವಾಮಿ, ಸಹಾಯಕ ಆಡಳಿತಾಧಿಕಾರಿ ರಾಜೇಂದ್ರ, ಡಿಪೊ ವ್ಯವಸ್ಥಾಪಕ ಚೈತನ್ಯ ಅಗಳಗಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-24-512602345

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.