ಹುಬ್ಬಳ್ಳಿ: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ನಗರದ ಸಾಯಿಪ್ರಸಾದ ಅವರಿಗೆ ಉಣಕಲ್ ವೃತ್ತದ ಬಳಿ ಐದು ಮಂದಿಯ ಗುಂಪು ಅವಾಚ್ಯವಾಗಿ ನಿಂದಿಸಿ, ಬೈಕ್ ಚಾವಿಯಿಂದ ಚುಚ್ಚಿ ಹಲ್ಲೆ ನಡೆಸಿದ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ನಿವಾಸಿಗಳಾದ ಶಶಾಂಕ, ಗಗನ ಸೇರಿ ಐವರ ವಿರುದ್ಧ ದೂರು ನೀಡಲಾಗಿದೆ. ಇವರ ನಡುವೆ ಈ ಹಿಂದೆ ವರೂರಿನಲ್ಲಿ ಜಗಳ ನಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಮೇ 27ರಂದು ಸಾಯಿಪ್ರಸಾದ ಅವರು ಬೈಕ್ನಲ್ಲಿ ಹೋಗುತ್ತಿದ್ದಾಗ, ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಹಲ್ಲೆ: ರಿಯಲ್ ಎಸ್ಟೇಟ್ ವ್ಯವಹಾರ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಇಬ್ಬರ ಮೇಲೆ ಆರು ಮಂದಿ ರಾಡ್, ಕಟ್ಟಿಗೆ ಹಾಗೂ ಟೈಲ್ಸ್ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಕುರಿತು ಗೋಕುಲ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ನಿವಾಸಿಗಳಾದ ಪ್ರವೀಣ ಮತ್ತು ಅವರ ಬಾವನ ಮೇಲೆ ಅಕ್ಷಯ ಕಾಲೊನಿಯಲ್ಲಿ ಹಲ್ಲೆ ನಡೆದಿದ್ದು, ನಿತೀನ್ ಕೆಲಗೇರಿ, ಬಸವರಾಜ, ಜ್ಯೋತಿ, ನವೀನ, ಪ್ರಕಾಶ, ಪ್ರಸಾದ ಸೇರಿ ಹತ್ತು ಮಂದಿ ವಿರುದ್ಧ ಪ್ರವಿಣ ಅವರ ಸಂಬಂಧಿ ಪ್ರಿಯಾಂಕಾ ದೂರು ನೀಡಿದ್ದಾರೆ. ಪ್ರಿಯಾಂಕಾ ಅವರ ಮನೆಯ ಹತ್ತಿರ ಆರೋಪಿಗಳು ಮೂತ್ರ ವಿಸರ್ಜನೆ ಮಾಡಿದ್ದರು. ಅದನ್ನು ಪ್ರಶ್ನಿಸಿದ್ದಕ್ಕೆ, ವ್ಯವಹಾರದ ವಿಚಾರದ ಹಿನ್ನೆಲೆಯಲ್ಲಿ ಇಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಚಿನ್ನಾಭರಣ ಕಳವು: ಹುಬ್ಬಳ್ಳಿ ತಾಲ್ಲೂಕಿನ ಶೆರೇವಾಡ ಗ್ರಾಮದ ಬಸವೇಶ್ವರ ನಗರದ ಅಣ್ಣಿಗೇರಿ ಬಡಾವಣೆಯ ಅರುಣಕುಮಾರ ಅಣ್ಣಿಗೇರಿ ಅವರ ಮನೆ ಬಾಗಿಲಿನ ಬೀಗ ಮುರಿದು, ₹8.30 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಈ ಬಗ್ಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆನ್ಲೈನ್ನಲ್ಲಿ ವಂಚನೆ: ಯುತ್ರಿ ಎಕ್ಸಿಸ್ ಸೆಕ್ಯುರಿಟಿಯಲ್ಲಿ ಹಣ ಹೂಡಿಕೆ ಮಾಡಿದರೆ ಲಾಭ ಗಳಿಸಬಹುದು ಎಂದು ವಿದ್ಯಾನಗರದ ರಮೇಶ ಕುಲಕರ್ಣಿ ಅವರಿಗೆ ನಂಬಿಸಿದ ವ್ಯಕ್ತಿ, ಅವರಿಂದ ₹8.32 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ್ದಾನೆ. ಈ ಬಗ್ಗೆ ಹುಬ್ಬಳ್ಳಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಲ್ಲೆ; ಪ್ರಕರಣ ದಾಖಲು: ಟಿ–20 ಕ್ರಿಕೆಟ್ ಟೂರ್ನಿಯ ಫೈನಲ್ನಲ್ಲಿ ಆರ್ಸಿಬಿ ತಂಡ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿದ ವಿಚಾರಕ್ಕೆ ಎರಡು ಕುಟುಂಬಗಳ ಸದಸ್ಯರು ಹೊಡೆದಾಡಿಕೊಂಡ ಬಗ್ಗೆ ಶಹರ ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.

ಮಂಟೂರ ರಸ್ತೆಯ ಅರಳಿಕಟ್ಟೆ ಕಾಲೊನಿಯ ಮನೆಯೊಂದರ ಎದುರು ಭಾನುವಾರ ರಾತ್ರಿ ಪಟಾಕಿ ಸಿಡಿಸಲಾಗಿತ್ತು. ಆ ಕುರಿತು ಮನೆಯವರು ಮತ್ತೊಂದು ಕುಟುಂಬದ ಸದಸ್ಯರನ್ನು ಪ್ರಶ್ನಿಸಿದ್ದರು. ನಾವು ಪಟಾಕಿ ಸಿಡಿಸಿಲ್ಲ ಎಂದಿದ್ದಕ್ಕೆ ಗಲಾಟೆ ಶುರುವಾಗಿದ್ದು, ಒಬ್ಬರ ಮೇಲೆ ಹಲ್ಲೆ ಮಾಡಲಾಗಿತ್ತು. ಇದೇ ವಿಚಾರವಾಗಿ ಸೋಮವಾರ ಬೆಳಿಗ್ಗೆ ಆ ಎರಡು ಕುಟುಂಬದವರ ನಡುವೆ ಮತ್ತೆ ಜಗಳ ಪ್ರಾರಂಭವಾಗಿ ಕಲ್ಲು ತೂರಾಟ ನಡೆದಿದೆ. 14 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-24-892486067

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.