ಹುಬ್ಬಳ್ಳಿ: ಇಲ್ಲಿಯ ಅಕ್ಷಯ ಪಾರ್ಕ್ ಬಳಿ ಮಹಿಳೆಗೆ ಆಸಭ್ಯವಾಗಿ ಕೈಸನ್ನೆ ಮಾಡಿದ ಇಬ್ಬರ ವಿರುದ್ಧ ಗೋಕುಲ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಸುರೇಶ ಎ. ಮತ್ತು ಸಂದೇಶ ಅವರ ವಿರುದ್ಧ, ಸುಮೊಟೊ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಗೆ ಅಸಭ್ಯವಾಗಿ ಕೈ ಸನ್ನೆ ಮಾಡಿ ಲೈಂಗಿಕ ಕಿರುಕುಳ ನೀಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಲ ಪಾವತಿಗೆ ಕಿರುಕುಳ: ಬಜಾಜ್ ಫೈನಾನ್ಸ್ನಲ್ಲಿ ಸಾಲದ ಹಣ ತುಂಬುವ ವಿಚಾರವಾಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರ ವಿರುದ್ಧ ಗೋಕುಲರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ನಿವಾಸಿಗಳಾದ ನವೀನ ಮತ್ತು ಸುನೀಲ ವಿರುದ್ಧ ಮಹಿಳೆ ದೂರು ನೀಡಿದ್ದಾರೆ. ಆರೋಪಿಗಳು ಮಹಿಳೆಯ ಮನೆ ಬಳಿ ತೆರಳಿ ಕಿರುಕುಳ ಕೊಟ್ಟಿದ್ದಲ್ಲದೆ, ಕೆಲಸ ಮಾಡುವ ಸ್ಥಳಕ್ಕೂ ಹೋಗಿ ಕಿರುಕುಳ ನೀಡಿದ್ದಾರೆ. ಕಿರುಕುಳ ನೀಡಿರುವ ವಿಡಿಯೊ ಚಿತ್ರೀಕರಣ ಮಾಡಿಕೊಳ್ಳಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.