ಹುಬ್ಬಳ್ಳಿ: ‘ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಿಂದ ಹುಬ್ಬಳ್ಳಿಗೆ ಬಂದು ಬೇರೆಡೆಗೆ ತೆರಳುತ್ತಿದ್ದ ನೂರಾರು ಕಾರ್ಮಿಕರನ್ನು, ನಗರದ ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದಲ್ಲಿ ನೆಲದ ಮೇಲೆ ಕೂರಿಸಿ ಅವರ ಮೇಲೆ ನೈತಿಕ ಪೊಲೀಸ್ಗಿರಿ ಪ್ರದರ್ಶಿಸಿದ ಶಾಸಕ ಮಹೇಶ ಟೆಂಗಿನಕಾಯಿ ಅವರ ನಡೆ ಖಂಡನೀಯ’ ಎಂದು ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಜನಪ್ರತಿನಿಧಿಯಾದವರು ಅಧಿಕಾರಿಗಳಿಂದ ಮಾಹಿತಿ ಪಡೆಯಬೇಕೇ ಹೊರತು ಅಮಾನವೀಯವಾಗಿ ವರ್ತಿಸುವುದು ಸರಿಯಲ್ಲ. ಅಲ್ಲದೆ, ಜನಪ್ರತಿನಿಧಿಯಾಗಿ ಕಾರ್ಮಿಕರ ಜತೆ ಅವರು ಅಸಭ್ಯವಾಗಿ ನಡೆದುಕೊಂಡಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳುವ ಬದಲು, ಶಾಸಕರ ಅಮಾನವೀಯ ಕೃತ್ಯಕ್ಕೆ ಬೆಂಬಲ ನೀಡಿದ್ದು ಅಕ್ಷಮ್ಯ. ಶಾಸಕರನ್ನು ಸಮಾಧಾನಪಡಿಸಲು, ಓಲೈಸಲು ಪೊಲೀಸರು ಹರಸಾಹಸ ಪಟ್ಟಿರುವುದು ಆಡಳಿತ ವ್ಯವಸ್ಥೆಯ ಸಂಪೂರ್ಣ ಅಧಃಪತನಕ್ಕೆ ಕೈಗನ್ನಡಿಯಾಗಿದೆ’ ಎಂದು ಕಿಡಿಕಾರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-24-437810975

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.