ಹುಬ್ಬಳ್ಳಿ: ‘ಲವ್ ಜಿಹಾದ್ ವಿರುದ್ಧ ದೇಶದಲ್ಲಿ ಕಠಿಣ ಕಾನೂನು ಜಾರಿಗೊಳಿಸಬೇಕು. ಮದರಸಾಗಳ ಮೇಲೆ ನಿಷೇಧ ಹೇರಬೇಕು. ವಿವಾಹ ನೋಂದಣಿ ನಿಯಮ ಬಿಗಿ ಆಗಬೇಕು’ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಆಗ್ರಹಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲವ್ಜಿಹಾದ್, ಮತಾಂತರ ಹಾಗೂ ಅಪಹರಣದ ಮೂಲಕ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗುವ ಜಾಲ ಸಕ್ರಿಯವಾಗಿದೆ. ಈ ಕುರಿತು ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಒಪ್ಪಿಸಬೇಕು’ ಎಂದರು.

‘ಐಟಿ (ಮಾಹಿತಿ ತಂತ್ರಜ್ಞಾನ) ಕಂಪನಿಗಳಲ್ಲಿ ಹಿಂದೂ ಸಮಾಜದ ಹೆಣ್ಣುಮಕ್ಕಳಿಗೆ ವಂಚಿಸುವ ಬಹುದೊಡ್ಡ ಜಾಲವಿದ್ದು, ಈ ಕುರಿತು ಶೀಘ್ರದಲ್ಲೇ ಗೃಹಸಚಿವರಿಗೆ ದಾಖಲೆ ಸಲ್ಲಿಸಲಾಗುತ್ತದೆ’ ಎಂದರು.

‘ದೇಶದಲ್ಲಿ ಹಿಂದೂ ಸಮಾಜದ ಹೆಣ್ಣುಮಕ್ಕಳನ್ನು ಮುಸ್ಲಿಂ ಸಮುದಾಯದ ಯುವಕರು ಪುಸಲಾಯಿಸಿ, ಮತಾಂತರ ಮಾಡುತ್ತಿದ್ದಾರೆ. ಇದಕ್ಕೆ ಅಪ್ರಾಪ್ತ ಮಕ್ಕಳೂ ಬಲಿಯಾಗಿದ್ದಾರೆ. ನಾಪತ್ತೆಯಾದ ಬಹುತೇಕ ಹೆಣ್ಣುಮಕ್ಕಳು ಇನ್ನೂ ಪತ್ತೆಯಾಗಿಲ್ಲ’ ಎಂದು
ತಿಳಿಸಿದರು.

‘ಲವ್ ಜಿಹಾದ್ ಪ್ರಕರಣಗಳನ್ನು ದಾಖಲಿಸಿಕೊಳ್ಳಲು ಪೊಲೀಸರು ಸಹ ಸತಾಯಿಸುತ್ತಾರೆ. ರಾಜಿ ಮಾಡಲು ಯತ್ನಿಸುತ್ತಾರೆ. ಕಾಂಗ್ರೆಸ್ ಸರ್ಕಾರ ಸಹ ಇಂತಹ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದು, ಇದರ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.