ಹುಬ್ಬಳ್ಳಿ: ಮಹಾ ಮೇಳದ ವ್ಯವಸ್ಥೆಗೆ ಅನುಕೂಲ ಕಲ್ಪಿಸಲು ಮತ್ತು ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿರ್ವಹಿಸಲು, ಎಸ್ಎಸ್ಎಸ್ ಹುಬ್ಬಳ್ಳಿ ಮತ್ತು ಪ್ರಯಾಗರಾಜ್ ಜಂಕ್ಷನ್ ನಡುವೆ ಏಕಮುಖ ಕಾಯ್ದಿರಿಸದ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಎಸ್ಎಸ್ಎಸ್ ಹುಬ್ಬಳ್ಳಿ–ಪ್ರಯಾಗರಾಜ್ ಏಕಮುಖ ಕಾಯ್ದಿರಿಸದ ವಿಶೇಷ ಎಕ್ಸ್ಪ್ರೆಸ್ ರೈಲು (07351) ಡಿ.4 ಮತ್ತು ಡಿ.9ರಂದು ಸಂಚರಿಸಲಿದೆ. ಈ ರೈಲು ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಸಂಜೆ 6.15ಕ್ಕೆ ಹೊರಟು ಕ್ರಮವಾಗಿ ಶನಿವಾರ ಮತ್ತು ಗುರುವಾರ ಬೆಳಿಗ್ಗೆ 8 ಗಂಟೆಗೆ ಪ್ರಯಾಗರಾಜ್ ತಲುಪಲಿದೆ.

ಗದಗ, ಬಾದಾಮಿ, ಬಾಗಲಕೋಟೆ, ಆಲಮಟ್ಟಿ, ವಿಜಯಪುರ, ಸೋಲಾಪುರ, ದೌಂಡ್, ಅಹಮದ್ನಗರ, ಕೋಪರ್ಗಾಂವ್, ಮನ್ಮಾಡ್, ಭೂಸಾವಳ, ಖಾಂಡ್ವಾ, ಇಟಾರ್ಸಿ, ಪಿಪಾರಿಯಾ, ಜಬಲ್ಪುರ, ಕಟ್ನಿ, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.