ಹುಬ್ಬಳ್ಳಿ: ‘ಮಳೆ ಬಂದ ಸಂದರ್ಭದಲ್ಲಿ ಇಲ್ಲಿನ ದಾಜಿಬಾನಪೇಟೆಯ ತುಳಜಾಭವಾನಿ ದೇವಸ್ಥಾನದ ಆವರಣಕ್ಕೆ ನಾಲಾದ ಕೊಳಚೆ ನೀರು ಸೇರುತ್ತದೆ ಇದನ್ನು ತಡೆಯುವ ನಿಟ್ಟಿನಲ್ಲಿ ಪ್ರತಿಜ್ಞಾವಿಧಿ ಸ್ವೀಕಾರಕ್ಕಾಗಿ ಸಹಿ ಸಂಗ್ರಹ ಅಭಿಯಾನ ಮಾಡಲಾಗುವುದು’ ಎಂದು ಅಕ್ಕಾ ಫೌಂಡೇಷನ್ ಟ್ರಸ್ಟ್ನ ವೀರಪ್ಪ ಅರಕೇರಿ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಶ್ವ ಭೂಮಿ ದಿನವಾದ ಏ. 22ರಿಂದ ವಿಶ್ವ ಪರಿಸರ ದಿನವಾದ ಜೂನ್ 5ರ ವರೆಗೆ ಪ್ರತಿ ಎರಡು ದಿನಕ್ಕೊಮ್ಮೆ ಬೆಳಿಗ್ಗೆ 11ರಿಂದ ಮಧ್ಯಾಹ್ನ 12 ಗಂಟೆಯ ವರೆಗೆ ಸಹಸ್ರಾರ್ಜುನ ವೃತ್ತದ ಬಳಿ ಇರುವ ನಾಲಾದ ಹತ್ತಿರ ಅಭಿಯಾನ ನಡೆಸಲಾಗುವುದು’ ಎಂದು ತಿಳಿಸಿದರು.

‘ನಾಲಾಕ್ಕೆ ತ್ಯಾಜ್ಯ ಎಸೆಯದಂತೆ ಸುತ್ತಮುತ್ತಲಿನ ಅಂಗಡಿಕಾರರಿಗೆ ಮನವರಿಕೆ ಮಾಡಲಾಗುವುದು’ ಎಂದರು.

‘ಹುಬ್ಬಳ್ಳಿ– ಧಾರವಾಡದಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಉಚಿತ ಶೌಚಾಲಯ ನಿರ್ಮಿಸಬೇಕು ರಾಜ್ಯ ಸರ್ಕಾರವು ಪರಿಸರ ತುರ್ತು ಪರಿಸ್ಥಿತಿ ಘೋಷಿಸಬೇಕು’ ಎಂದು ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-24-306614861

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.