ಹುಬ್ಬಳ್ಳಿ: ಕಳಸಾ ಬಂಡೂರಿ, ಮಹಾದಾಯಿ ಯೋಜನೆ ಅನುಷ್ಠಾನಕ್ಕೆ ಕ್ರಮ ಹಾಗೂ ರಾಜ್ಯದ ಐದು ವಿಮಾನ ನಿಲ್ದಾಣಗಳಿಗೆ ನಾಡಿನ ಮಹನೀಯರ ಹೆಸರು ಇಡಬೇಕು ಎಂದು ಆಗ್ರಹಿಸಿ ಶನಿವಾರ ಹುಬ್ಬಳ್ಳಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ಸಂಗೊಳ್ಳಿ ರಾಯಣ್ಣ ವೃತ್ತದಿಂದ ಚಿಟಗುಪ್ಪಿ ಉದ್ಯಾನದ ಬಳಿ ಇರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕಚೇರಿವರೆಗೆ ಡೋಲು ಬಾರಿಸುತ್ತ, ಚಕ್ಕಡಿ ಮೆರವಣಿಗೆ ನಡೆಸಿದರು. ಸಚಿವರ ಕಚೇರಿ ಎದುರು ಧರಣಿ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

‘ಆದ್ಯತೆ ಮೇರೆಗೆ ತುರ್ತು ಕ್ರಮ ಕೈಗೊಂಡು ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಒತ್ತಾಯಿಸಿದರು. ಸಚಿವರ ಆಪ್ತ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸಿದರು.

‘ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು, ರಾಜ್ಯ ಹಾಗೂ ಕೇಂದ್ರಕ್ಕೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಜೊತೆ ಚರ್ಚಿಸಿ ಸಮಸ್ಯೆ ಇತ್ಯರ್ಥಪಡಿಸಬೇಕು’ ಎಂದು ಸಮಿತಿ ಮುಖಂಡ ಶಿವಾನಂದ ಮುತ್ತಣ್ಣವರ ಹೇಳಿದರು.

ಸೆ.13ರಂದು ಹೋರಾಟ: ಮಹದಾಯಿ ಯೋಜನೆ ಅನುಷ್ಠಾನ ಮತ್ತು ವಿಮಾನ ನಿಲ್ದಾಣಕ್ಕೆ ಮಹನೀಯರ ಹೆಸರು ಇಡುವ ಪ್ರಕ್ರಿಯೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಸೆ.13ರಂದು ಹುಬ್ಬಳ್ಳಿಯಲ್ಲಿ ಬೃಹತ್ ಹೋರಾಟ ನಡೆಸುವುದಾಗಿ ಸಮಿತಿ ಎಚ್ಚರಿಸಿದೆ.

ಚಂದ್ರಕಾಂತ ಗೋಕಾಕ, ಮಲ್ಲಿಕಾರ್ಜುನ ಕುನ್ನೂರು, ಕಪರಪ್ಪ ಗೊರಗುದ್ದಿ, ಮಲ್ಲಿಕಾರ್ಜುನ ತಾಲೂರ, ಯಲ್ಲಪ್ಪ ಕುಂದಗೋಳ, ಬಸವರಾಜ ಅಗಸಿಮನಿ, ಚಂದ್ರಣ್ಣ ಕುರುಬರ ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-24-1850075559

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.