ಪ್ರಜಾವಣಿ ವಾರ್ತೆ

ಹುಬ್ಬಳ್ಳಿ: ‘ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಸಮಾಜದ ಸ್ವಾಸ್ಥ್ಯ ಕದಡುವ ಘಟನೆಗಳು ಪದೇ ಪದೇ ನಡೆಯುತ್ತಿದ್ದು, ಅದರ ಹಿಂದಿರುವ ವ್ಯಕ್ತಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಬೇಕು’ ಎಂದು ಸಮಸ್ತ ಹಿಂದೂ ಸಮಾಜ ಸಂಘಟನೆ ಆಗ್ರಹಿಸಿದೆ.

ಸೋಮವಾರ ನವನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಕಮಿಷನರ್ ಎನ್. ಶಶಿಕುಮಾರ್ ನೇತೃತ್ವದಲ್ಲಿ ಸಭೆ ನಡೆಸಿದ ಸಂಘಟನೆ ಸದಸ್ಯರು, ‘ಬೇರೆ ಸಮುದಾಯದ ಕೆಲವು ಯುವಕರು ಹಿಂದೂ ಯುವತಿಯರ ಮತಾಂತರಕ್ಕೆ ಯತ್ನಿಸುತ್ತಿದ್ದಾರೆ. ಇದರ ಹಿಂದೆ ವ್ಯವಸ್ಥಿತ ಜಾಲವಿದ್ದು ಪೊಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.

‘ಹಿಂದೂ ಯುವತಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಒಂದರ ಹಿಂದೊಂದರಂತೆ ಬೆಳಕಿಗೆ ಬರುತ್ತಿದೆ. ಕೇಶ್ವಾಪುರ, ಅಶೋಕನಗರ, ಹಳೇಹುಬ್ಬಳ್ಳಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಜಿಮ್, ಏರೋಬಿಕ್ಸ್, ಶಾಲೆ–ಕಾಲೇಜುಗಳನ್ನು ಗುರಿಯಾಗಿಸಿಕೊಳ್ಳುತ್ತಿದ್ದಾರೆ. ಇದು ಹಿಂದೂ ಸಮಾಜದ ಆಕ್ರೋಶಕ್ಕೆ ಕಾರಣವಾಗಿದೆ. ಎಲ್ಲ ಪ್ರಕರಣಗಳ ಆರೋಪಿಗಳನ್ನು ಕೂಲಕಂಷ ತನಿಖೆಗೆ ಒಳಪಡಿಸಬೇಕು’ ಎಂದು ಕಮಿಷನರ್ಗೆ ಸಲ್ಲಿಸಿದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಶಂಕರಣ್ಣ ಮುನವಳ್ಳಿ, ಮಹಾದೇವ ಕರಮರಿ, ವಿಎಸ್ವಿ ಪ್ರಸಾದ್, ಸುಭಾಸಸಿಂಗ್ ಜಮಾದಾರ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-24-815053924

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.