ಹುಬ್ಬಳ್ಳಿ: ‘ಸೌಕರ್ಯ, ಶಿಸ್ತುಗಳಿದ್ದರೆ ಸಾಲದು. ಸಾಧನೆಗೆ ಸೌಜನ್ಯವಿದ್ದರೇನೆ ಬೆಲೆ ನೆಲೆ. ನೀತಿ ನಿಯಮಗಳಿಲ್ಲದೇ ಸಮಾಜ, ನಾಡು ಬೆಳೆಯಲಾರದು’ ಎಂದು ಬಾಳೆಹೊನ್ನೂರಿನ ರಂಭಾಪುರಿ ವೀರಸೋಮೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.

ಇಲ್ಲಿನ ವಿದ್ಯಾನಗರದ ರಂಭಾಪುರಿ ಜಗದ್ಗುರು ವೀರಗಂಗಾಧರ ಸಮುದಾಯ ಭವನದಲ್ಲಿ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಪಾರ್ವತಿ ಮಹಿಳಾ ಅಭಿವೃದ್ಧಿ ಮಂಡಳದ 24ನೇ ವಾರ್ಷಿಕೋತ್ಸವ ಪ್ರಯುಕ್ತ ಶನಿವಾರ ಹಮ್ಮಿಕೊಂಡಿದ್ದ ಜನ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ, ಆಶೀರ್ವಚನ ನೀಡಿದರು.

‘ನಿರ್ಭಯದಿಂದ ಬಾಳುವುದೇ ನಿಜವಾದ ಬದುಕು. ವೀರಶೈವ ಧರ್ಮದಲ್ಲಿ ಆಧ್ಯಾತ್ಮ ಸಂಪತ್ತು ಬೆಟ್ಟದಷ್ಟಿದ್ದು, ಅದರ ಅರಿವು ಮತ್ತು ಆಚರಣೆಗೆ ಮನುಷ್ಯ ಬದ್ಧನಾದರೆ ಜೀವನ ಸುಖಮಯವಾಗುತ್ತದೆ. ರೇಣುಕಾಚಾರ್ಯರ ಆಧ್ಯಾತ್ಮ ಚಿಂತನೆಗಳು ಸರ್ವಕಾಲಕ್ಕೂ ಸರ್ವರಿಗೂ ಅನ್ವಹಿಸುತ್ತವೆ’ ಎಂದರು.

ಪಾರ್ವತಿ ಮಹಿಳಾ ಅಭಿವೃದ್ಧಿ ಮಂಡಳದ ಅಧ್ಯಕ್ಷೆ ಇಂದುಮತಿ ಮಾನ್ವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಮಂಗಲಾ ಹಿರೇಮಠ, ವಿದ್ಯಾ ಹೊರಕೇರಿ ಅವರಿಂದ ವೇದಘೋಷ ಜರುಗಿತು. ಮಹಿಳಾ ಮಂಡಳದ ಸದಸ್ಯರು ‘ವಿಭೂತಿ’ ಕಿರು ನಾಟಕ ಪ್ರದರ್ಶಿಸಿದರು.

ಸುಳ್ಳದ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಶ್ರೀ, ರೇಣುಕ ಪ್ರಸಾದ್, ಪ್ರಕಾಶ ಬೆಂಡಿಗೇರಿ, ವಿಶ್ವನಾಥ ಹಿರೇಗೌಡರ, ಪ್ರಭಾವತಿ ಹಿರೇಮಠ, ವಾಣಿಶ್ರೀ ಹಿರೇಮಠ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-24-2010021573

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.