ಹುಬ್ಬಳ್ಳಿ: ನಗರದಲ್ಲಿ ಹೋಳಿ ಹಬ್ಬದ ಪ್ರಯುಕ್ತ ಶನಿವಾರ ನಡೆಯಲಿರುವ ರಂಗಪಂಚಮಿಯ ರಂಗಿನಾಟಕ್ಕೆ ಸಿದ್ಧತೆ ಜೋರಾಗಿದೆ. ‘ರೇನ್ ಡಾನ್ಸ್’, ‘ಬಣ್ಣದುತ್ಸವ’, ‘ಹೋಳಿ ಸಂಭ್ರಮ’ದ ಹೆಸರಲ್ಲಿ ವಿವಿಧ ಸಂಘಟನೆಗಳು ಕಾರ್ಯಕ್ರಮ ಆಯೋಜಿಸಿದೆ. ಈ ನಡುವೆ ಪೊಲೀಸ್ ಇಲಾಖೆ ಶಾಂತಿಯುತ ಹಬ್ಬದ ಆಚರಣೆಗೆ ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

ನಗರ ಪ್ರವೇಶಿಸುವ ಗಡಿ ಪ್ರದೇಶಗಳಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಿ, ಬರುವವರ ಹಾಗೂ ಹೋಗುವವರನ್ನು ಪೊಲೀಸರು ಸೂಕ್ಷ್ಮವಾಗಿ ತಪಾಸಣೆ ನಡೆಸುತ್ತಿದ್ದಾರೆ. ಅನುಮಾನಾಸ್ಪದವಾಗಿ ಸಂಚರಿಸುವವರ ಮಾಹಿತಿ ಸಂಗ್ರಹಿಸಿ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ನಗರದಾದ್ಯಂತ ಕೆಎಸ್ಆರ್ಪಿ, ಗೃಹರಕ್ಷಕ ದಳ ಸೇರಿದಂತೆ ಭದ್ರತೆಗೆ 2,500ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆಗೆ ಇಲಾಖೆ ಮುಂದಾಗಿದೆ.

ಹುಬ್ಬಳ್ಳಿಯ ಜನತೆಯಷ್ಟೇ ಅಲ್ಲದೆ, ಧಾರವಾಡ ಹಾಗೂ ಸುತ್ತಮುತ್ತಲಿನ ಗ್ರಾಮಗಳ, ಅಕ್ಕಪಕ್ಕದ ಜಿಲ್ಲೆಯ ಜನರು ಬಣ್ಣದಾಟದಲ್ಲಿ ಭಾಗಿಯಾಗಿ, ಮನಸ್ಸೋ ಇಚ್ಛೆ ಕುಣಿದು ಸಂಭ್ರಮಿಸುತ್ತಾರೆ. ಈ ಸಂದರ್ಭ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು, ಸಮಾಜದ ಮುಖಂಡರ ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಜೊತೆ ಸೌಹಾರ್ದ ಸಭೆ ನಡೆಸಿ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ರೌಡಿಗಳ ಪಟ್ಟಿ ಪರಿಶೀಲನೆ ನಡೆಸಿದ್ದು, ಗಡಿಪಾರಾದ ರೌಡಿಗಳ ಮಾಹಿತಿ ಸಂಗ್ರಹಿಸಿ ಅವರ ಚಲಚನವಲನದ ಕುರಿತು ನಿಗಾ ಇಟ್ಟಿದ್ದಾರೆ. ಆಗಾಗ ಅಪರಾಧ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿರುವ ರೌಡಿಗಳನ್ನು ಠಾಣೆಗಳಿಗೆ ಕರೆಸಿ, ಮುಚ್ಚಳಿಕೆ ಬರೆಸಿಕೊಂಡಿದ್ದಾರೆ.

ಮೇದಾರ ಓಣಿ, ಯಲ್ಲಾಪುರ ಓಣಿ, ಕಮರಿಪೇಟೆ, ಹಳೇಹುಬ್ಬಳ್ಳಿ, ಚನ್ನಪೇಟೆ ಪ್ರದೇಶದ ಸುತ್ತಮುತ್ತ ರಂಗಪಂಚಮಿ ಅದ್ದೂರಿಯಾಗಿ ಆಚರಿಸುವುದರಿಂದ, ಈ ಭಾಗದ ಹತ್ತಕ್ಕೂ ಹೆಚ್ಚು ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಧಾರ್ಮಿಕ ಕಟ್ಟಡಗಳ ಸುತ್ತ ಕೆಎಸ್ಆರ್ಪಿ ತುಕಡಿ ಜೊತೆಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರೇನ್ ಡ್ಯಾನ್ಸ್ ನಡೆಯುವ ಹಾಗೂ ಕಾಮಣ್ಣ–ರತಿಮೂರ್ತಿಗಳ ಮೆರವಣಿಗೆ ಸಾಗುವ ಹಳೇಹುಬ್ಬಳ್ಳಿ ಚನ್ನಪೇಟೆ, ದುರ್ಗದಬೈಲ್, ಇಂಡಿಪಂಪ್ ಮಾರ್ಗದ ಸುತ್ತಮುತ್ತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಹದ್ದಿನ ಕಣ್ಣು ಇಡಲಾಗಿದೆ.

‘ಸಾಮಾಜಿಕ ಜಾಲತಾಣಗಳಲ್ಲಿ ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುವ ಹಾಗೂ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮಕೈಗೊಳ್ಳಲು ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ಸನ್ನದ್ಧವಾಗಿದೆ. ಕೆಲವು ಖಾತೆಗಳ ಮೇಲೆ ನಿಗಾ ಇಟ್ಟಿದ್ದು, ನಿರಂತರವಾಗಿ ಪರಿಶೀಲನೆ ನಡೆಸುತ್ತಿದೆ. ಮೆರವಣಿಗೆ ಸಾಗುವ ಮಾರ್ಗದಲ್ಲಿ ಹಾಗೂ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ನಡೆಯುವ ಚಟುವಟಿಕೆಗಳನ್ನು ಗಮನಿಸಲು ನೂರಕ್ಕೂ ಹೆಚ್ಚು ಸಿಬ್ಬಂದಿ ಮಫ್ತಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260307-24-2123340980

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.