ಹುಬ್ಬಳ್ಳಿ: ಪೂರ್ವ ವಿಧಾನಸಭಾ ಕ್ಷೇತ್ರದ ನ್ಯೂ ಇಂಗ್ಲಿಷ್ ಸ್ಕೂಲ್ನಿಂದ ಇಂಡಿ ಪಂಪ್ ವರೆಗಿನ ರಸ್ತೆ ವಿಸ್ತರಣೆಗೆ ಶೀಘ್ರವೇ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಬೇಕು ಎಂದು ಶಾಸಕ ಪ್ರಸಾದ ಅಬ್ಬಯ್ಯ ಸೂಚಿಸಿದರು.

ಇಲ್ಲಿನ ಸರ್ಕಿಟ್ ಹೌಸ್ನಲ್ಲಿ ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸೋಮವಾರ ಅವರು ಸಭೆ ನಡೆಸಿದರು.

‘ಹಳೇ ಹುಬ್ಬಳ್ಳಿಯ ನ್ಯೂ ಇಂಗ್ಲಿಷ್ ಸ್ಕೂಲ್ನಿಂದ ಇಂಡಿ ಪಂಪ್ವರೆಗಿನ ರಸ್ತೆ ತೀವ್ರ ದಟ್ಟಣೆಯಿಂದ ಕೂಡಿದ್ದು, ಸುಗಮ ಸಂಚಾರಕ್ಕಾಗಿ ರಸ್ತೆ ವಿಸ್ತರಣೆ ಅವಶ್ಯ. ಭೂಸ್ವಾಧೀನಕ್ಕಾಗಿ ರಸ್ತೆ ಪಕ್ಕದ ವ್ಯಾಪಾರಸ್ಥರೊಂದಿಗೆ ಸಭೆ ನಡೆಸಬೇಕು. ಯಾವುದೇ ಅಡ್ಡಿ ಬಂದರೂ ತ್ವರಿತವಾಗಿ ಪರಿಹರಿಸಿ ಈ ಭಾಗದ ಜನರಿಗೆ ಸಂಚರಿಸಲು ಅನುಕೂಲ ಮಾಡಿಕೊಡಬೇಕು’ ಎಂದು ಅಧಿಕಾರಿಗಳಿಗೆ ತಿಳಿಸಿದರು.

‘1.24 ಕಿ.ಮೀ. ಉದ್ದದ ರಸ್ತೆಯನ್ನು ವಿಸ್ತರಣೆ ಮಾಡಲಾಗುತ್ತಿದೆ. 261 ಕಟ್ಟಡಗಳನ್ನು ಗುರುತಿಸಲಾಗಿದ್ದು, ಈ ಪೈಕಿ 243 ಖಾಸಗಿ ಹಾಗೂ 18 ಪಾಲಿಕೆ ಆಸ್ತಿಗಳಿವೆ. ಈಶ್ವರ, ವೀರಭದ್ರೇಶ್ವರ, ಬನಶಂಕರಿ, ಆಂಜನೇಯ ಸೇರಿದಂತೆ 6 ದೇವಸ್ಥಾನಗಳು ಮತ್ತು ಒಂದು ಮಸೀದಿ ಕೂಡ ಇವೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇದಕ್ಕೂ ಮೊದಲು ಶಾಸಕರು, ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ತಂಡವು ಇಂಡಿ ಪಂಪ್, ನ್ಯೂ ಇಂಗ್ಲಿಷ್ ಸ್ಕೂಲ್ ರಸ್ತೆಯಲ್ಲಿ ಸಂಚರಿಸಿ, ಪರಿಶೀಲನೆ ನಡೆಸಿತು. ಜಿಲ್ಲಾಧಿಕಾರಿ ಆರ್. ಸ್ನೇಹಲ್, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಡಿ. ಗೀತಾ, ಉಪ ವಿಭಾಗಾಧಿಕಾರಿ ಶಾಲಂ ಹುಸೇನ್, ಡಿಸಿಪಿ ಸಿ.ಆರ್. ರವೀಶ, ಎನ್.ಎಸ್. ಶೃತಿ, ಹುಬ್ಬಳ್ಳಿ ಶಹರ ತಹಶೀಲ್ದಾರ್ ಮಹೇಶ್ ಗಸ್ತೆ, ಪಾಲಿಕೆ ಉಪ ಆಯುಕ್ತ (ಅಭಿವೃದ್ಧಿ) ವಿಜಯಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-24-1555039501

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.