ಹುಬ್ಬಳ್ಳಿ: ನಗರದ ಹಳೇ ಕೋರ್ಟ್ ವೃತ್ತದ ಬಳಿಯ ಸಾಯಿ ಮಂದಿರದಲ್ಲಿ ಭಾನುವಾರ ಪೊಲೀಸ್ ಭದ್ರತೆಯಲ್ಲಿ ಆಡಳಿತ ಮಂಡಳಿಯ ವಿಶೇಷ ಸಾಮಾನ್ಯ ಸಭೆ ನಡೆಯಿತು.

ಆಡಳಿತ ಮಂಡಳಿ ಅಧ್ಯಕ್ಷರ ವಿರುದ್ಧ ಅವ್ಯವಹಾರದ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಭದ್ರತೆ ಹಾಕಲಾಗಿತ್ತು.

ಆಡಳಿತ ಮಂಡಳಿ ಅಧ್ಯಕ್ಷ ಬದಲಿಗೆ ಸದಸ್ಯರ ಒಪ್ಪಿಗೆ ಮೇರೆಗೆ ಸಭಾಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಯಿತು. ಅಧ್ಯಕ್ಷ ಹಾಗೂ ಆಡಳಿತ ಮಂಡಳಿ ವಿರುದ್ಧ ನೀಡಲಾದ ದೂರಿನ ಬಗ್ಗೆ ಚರ್ಚಿಸಲಾಯಿತು. ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಅಧ್ಯಕ್ಷರ ಆಯ್ಕೆ ಸರಿಯಾಗಿದ್ದು, ಉತ್ತಮ ಕಾರ್ಯಗಳು ನಡೆಯುತ್ತಿವೆ ಎನ್ನುವ ಅಭಿಪ್ರಾಯ ವ್ಯಕ್ತವಾಯಿತು ಎಂದು ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.

ಆರೋಪಗಳ ಕುರಿತು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವ ಕುರಿತು ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ. ಮಂದಿರದ ಕುರಿತು ಸುಳ್ಳು ಆರೋಪಗಳನ್ನು ದೊಡ್ಡದಾಗಿ ಬಿಂಬಿಸಲಾಗುತ್ತಿದ್ದು, ಇದಕ್ಕೆ ಅವಕಾಶ ಕೊಡಬಾರದು. ಕಾನೂನು ಸಲಹೆಗಾರರ ಸೂಚನೆಯಂತೆ ಮುಂದುವರಿಯುವ ಕುರಿತು ಸದಸ್ಯರು ಸಲಹೆ ನೀಡಿದರು ಎಂದು ತಿಳಿದು ಬಂದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-24-1516102182

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.