ಹುಬ್ಬಳ್ಳಿ: ‘ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ಪರಸ್ಪರ ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಆಗಸ್ಟ್ 21, 22 ಮತ್ತು 23ರಂದು ‘ಸಮಾಧಾನ ಸಮಾರೋಹ’ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ’ ಎಂದು ಪ್ರಧಾನ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶೆ ವೀಣಾ ನಾಯ್ಕರ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುಪ್ರೀಂ ಕೋರ್ಟ್ನಲ್ಲಿ ರಾಜ್ಯಕ್ಕೆ ಸಂಬಂಧಪಟ್ಟಂತೆ 4,328 ಪ್ರಕರಣಗಳನ್ನು ಪೂರ್ವ ಸಮಾಧಾನ ಪ್ರಕ್ರಿಯೆಗೆ ಗುರುತಿಸಲಾಗಿದೆ. ಅದರಲ್ಲಿ ಧಾರವಾಡ ಜಿಲ್ಲೆಯ 188 ಪ್ರಕರಣಗಳು ಬಾಕಿ ಇವೆ’ ಎಂದರು.

‘ಬ್ಯಾಂಕಿಂಗ್, ಆಸ್ತಿ ತೆರಿಗೆ, ಕೌಟುಂಬಿಕ ವಿವಾದಗಳು ಸೇರಿ ವಿವಿಧ ಪ್ರಕರಣಗಳನ್ನು ಜಿಲ್ಲಾವಾರು ವಿಂಗಡಿಸಿ, ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರಗಳಿಗೆ ಅಗತ್ಯ ಕ್ರಮಕೈಗೊಳ್ಳಲು ತಿಳಿಸಲಾಗಿದೆ. ಇತರ ರಾಜ್ಯಗಳ ಕಾನೂನು ಸೇವೆಗಳ ಪ್ರಾಧಿಕಾರಗಳೊಂದಿಗೆ ಸಂಯೋಜನೆ ಮಾಡಿಕೊಂಡು, ಪಕ್ಷಗಾರರು ಇತರ ರಾಜ್ಯಗಳಲ್ಲಿ ವಾಸಿಸುತ್ತಿದ್ದರೆ, ಜಿಲ್ಲಾ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿಗಳು ಪೂರ್ವ ಸಮಾಧಾನ ಪ್ರಕ್ರಿಯೆಗೆ ಅವಕಾಶ ಕಲ್ಪಿಸುತ್ತವೆ’ ಎಂದು ಹೇಳಿದರು.

‘ಪಕ್ಷಗಾರರಿಗೆ ನೋಟಿಸ್ ಜಾರಿಯಾದ ನಂತರ ಪೂರ್ವ ಸಮಾಧಾನ ಪ್ರಕ್ರಿಯೆಯನ್ನು ಸ್ಥಳೀಯ ಜಿಲ್ಲಾ, ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರಗಳಲ್ಲಿ ಭೌತಿಕ ಅಥವಾ ವರ್ಚುವಲ್ ವಿಧಾನದಲ್ಲಿ ನಡೆಸಲಾಗುತ್ತದೆ. ಪ್ರತಿ ವರ್ಷ ನಾಲ್ಕು ಬಾರಿ ಲೋಕ ಅದಾಲತ್ ಹಮ್ಮಿಕೊಳ್ಳಲಾಗುತ್ತದೆ’ ಎಂದು ತಿಳಿಸಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ವಿಶ್ವನಾಥ ಯಮಕನಮರಡಿ ಮಾತನಾಡಿ, ‘ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ತ್ವರಿತವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ದೊರೆತಿರುವ ಮಹತ್ವದ ಅವಕಾಶ ಇದಾಗಿದೆ. ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳುವುದರಿಂದ ನ್ಯಾಯಾಲಯಗಳಲ್ಲಿ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತವೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-24-820773211

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.