ಹುಬ್ಬಳ್ಳಿ: ‘ನಮ್ಮ ಹಿತ ನಿಮಗೆ ಬೇಕಾಗಿಲ್ಲ, ನಾವು ನಿಮಗೆ ಮತ ಹಾಕುವುದಿಲ್ಲ’ ಎಂಬ ಘೋಷಣೆಯೊಂದಿಗೆ ಕರ್ನಾಟಕ ರಾಜ್ಯ ಹಿರಿಯ ನಾಗರಿಕರು ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ರಾಷ್ಟ್ರೀಯ ಹಿರಿಯ ನಾಗರಿಕರ ಜೀವನ ಗೌರವ ಅಭಿಯಾನ, ಅರ್ಥಕ್ರಾಂತಿ ಟ್ರಸ್ಟ್ ವತಿಯಿಂದ ಬೃಹತ್ ಪ್ರತಿಭಟನಾ ರ್ಯಾಲಿ ನಗರದಲ್ಲಿ ಮಂಗಳವಾರ ನಡೆಯಿತು.

ಇಲ್ಲಿನ ನೆಹರೂ ಮೈದಾನದಲ್ಲಿ ಸಮಾವೇಶಗೊಂಡ ವಿವಿಧ ಜಿಲ್ಲೆಗಳ ಹಿರಿಯ ನಾಗರಿಕರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲಿಂದ ಸ್ಟೇಷನ್ ರಸ್ತೆ, ಲ್ಯಾಮಿಂಗ್ಟನ್ ಶಾಲೆ ರಸ್ತೆ ಮಾರ್ಗವಾಗಿ ಸಾಗಿದ ರ್ಯಾಲಿ ಮಿನಿವಿಧಾನಸೌಧ ತಲುಪಿತು. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಹಶೀಲ್ದಾರ್ ಮಹೇಶ ಗಸ್ತೆ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಿ.ಎ.ಪಾಟೀಲ, ‘ಹಿರಿಯ ನಾಗರಿಕರು ಸಂಖ್ಯೆ ದೇಶದಲ್ಲಿ 20 ಕೋಟಿ, ರಾಜ್ಯದಲ್ಲಿ 80 ಲಕ್ಷದಷ್ಟಿದೆ. ಅವರ ರಕ್ಷಣೆಗೆ ಸಂವಿಧಾನಬದ್ಧ ಹಕ್ಕುಗಳನ್ನು ನೀಡಲಾಗಿದ್ದರೂ, ಸರ್ಕಾರಗಳು ಅನುಷ್ಠಾನಗೊಳಿಸುತ್ತಿಲ್ಲ. ಈ ಬಗ್ಗೆ ಹಲವು ವರ್ಷಗಳಿಂದ ಹೋರಾಟ ನಡೆಸಿದರೂ, ಸ್ಪಂದಿಸುತ್ತಿಲ್ಲ’ ಎಂದು ಆರೋಪಿಸಿದರು.

‘ಹಿರಿಯ ನಾಗರಿಕರ ಕಣ್ಣೊರೆಸುವ ತಂತ್ರವಾಗಿ ಅಲ್ಪ ಮೊತ್ತದ ಪಿಂಚಣಿ ಯೋಜನೆ ಜಾರಿಯಲ್ಲಿದೆ. ಹಿರಿಯ ನಾಗರಿಕರನ್ನು ರಾಷ್ಟ್ರದ ಸಂಪತ್ತೆಂದು ಘೋಷಿಸಬೇಕು. ಆರ್ಥಿಕವಾಗಿ ಹಿಂದುಳಿದವರಿಗೆ ₹10,000 ಪಿಂಚಣಿ ನೀಡಬೇಕೆಂದು ಪ್ರಧಾನಿ ಮೋದಿ ಅವರಿಗೂ ಮನವಿ ಸಲ್ಲಿಸಲಾಗಿದೆ. ಬೆಳಗಾವಿಯ ಸುವರ್ಣಸೌಧದಲ್ಲಿಈಚೆಗೆ ನಡೆದ ಅಧಿವೇಶನದಲ್ಲಿ ಪ್ರತಿಭಟನೆ ನಡೆಸಿದಾಗ, ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಶೀಘ್ರದಲ್ಲೇ ಸಭೆ ಕರೆದು ಚರ್ಚಿಸುವ ಭರವಸೆ ನೀಡಿದ್ದರು. ಆದರೆ, ಈವರೆಗೂ ಸಭೆ ನಡೆಸಿಲ್ಲ’ ಎಂದು ದೂರಿದರು.

‘ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹಿರಿಯರ ನಾಗರಿಕರಿಗೆ ಯಾವುದೇ ಸೌಲಭ್ಯ ಘೋಷಿಸಿಲ್ಲ. ದೇಶದಲ್ಲಿ ಶೇ 15–18ರಷ್ಟು ಮತದಾರರು ಹಿರಿಯರ ನಾಗರಿಕರೇ ಇದ್ದಾರೆ. ನಮ್ಮ ಬಗ್ಗೆ ನಿರ್ಲಕ್ಷ್ಯ ಧೋರಣೆ ಮುಂದುವರಿಸಿದಲ್ಲಿ ಮುಂದಿನ ಚುನಾವಣೆಯಲ್ಲಿ ಮತದಾನ ಮಾಡುವುದಿಲ್ಲ. ಅಲ್ಲಿಯವರೆಗೆ ಸರ್ಕಾರಗಳನ್ನು ಎಚ್ಚರಿಸಲು ಆಂದೋಲನ ರೂಪಿಸಿ, ಉಗ್ರ ಹೋರಾಟ ನಡೆಸಲಾಗುವುದು’ ಎಂದು ಹೇಳಿದರು.

ಸಂಘದ ರಾಷ್ಟ್ರೀಯ ಘಟಕದ ಉಪಾಧ್ಯಕ್ಷ ಮಹಾಂತೇಶ ಹಿರೇಮಠ, ರಾಜ್ಯ ಸಂಚಾಲಕ ಆರ್.ಕೆ.ಮಠದ, ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ಎ.ವೈ.ಬೆಂಡಿಗೇರಿ, ಮಹಿಳಾ ಘಟಕದ ಅಧ್ಯಕ್ಷೆ ಸುನಂದಾ ಬೆನ್ನೂರ, ಡಿ.ಟಿ.ಪಾಟೀಲ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-24-229138721

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.