ಹುಬ್ಬಳ್ಳಿ: ರಾಜ್ಯದಲ್ಲಿ ಹಿರಿಯ ನಾಗರಿಕರ ಸಮಸ್ಯೆ ಬಗೆಹರಿಸಲು ಮತ್ತು ಅವರ ಕಲ್ಯಾಣಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿ, ಸಚಿವರನ್ನು ನೇಮಿಸಬೇಕು ಎಂದು ಕರ್ನಾಟಕ ರಾಜ್ಯ ಹಿರಿಯ ನಾಗರಿಕರು ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಎ.ಪಾಟೀಲ ಆಗ್ರಹಿಸಿದ್ದಾರೆ.

ಹಿರಿಯ ನಾಗರಿಕರಿಗೆ ಸಿಗಬೇಕಾದ ಕಾನೂನುಬದ್ಧ ಸೌಲಭ್ಯಗಳನ್ನು ಪಡೆಯಲು ಸಂಘವು 10 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದೆ. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ. ಕೇರಳ ರಾಜ್ಯ ಸರ್ಕಾರ ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿ, ಸಚಿವರನ್ನು ನೇಮಿಸಿದೆ. ಅಲ್ಲದೆ, ತಿಂಗಳಿಗೆ ₹3 ಸಾವಿರ ವೃದ್ಧಾಪ್ಯವೇತನ ಮಂಜೂರು ಮಾಡಿದೆ. ರಾಜ್ಯ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-733648844

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.