ಹುಬ್ಬಳ್ಳಿ: ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ ಹಾಗೂ ಬೆಂಗಳೂರು ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್ ಅವರನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿರುವುದನ್ನು ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಸ್ವಾಗತಿಸಿದ್ದಾರೆ.

ಈ ಶಾಸಕರು ಇತ್ತೀಚಿನ ಎಲ್ಲ ಚುನಾವಣೆಗಳಲ್ಲಿ ಪಕ್ಷ ವಿರೋಧಿ ಕೆಲಸ ಮಾಡಿದ್ದರು. ಪಕ್ಷದ ಬಗ್ಗೆ ಹಾಗೂ ಹಿರಿಯ ನಾಯಕರ ಬಗ್ಗೆ ಹಗುರವಾಗಿ ಮಾತನಾಡಿದ್ದರು. ಪಕ್ಷದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳ ಭಾವನೆಗಳಿಗೆ ಸ್ಪಂದಿಸುತ್ತಿರಲಿಲ್ಲ. ಇದಲ್ಲದೇ, ಕಾಂಗ್ರೆಸ್ನೊಂದಿಗೆ ನೇರ ಒಡನಾಟ ಇಟ್ಟುಕೊಂಡಿದ್ದರಿಂದ ರಾಜ್ಯ ಹಾಗೂ ಕೇಂದ್ರ ಶಿಸ್ತು ಸಮಿತಿಯಿಂದ ನೋಟಿಸ್ ನೀಡಿ ಕಾರಣ ಕೇಳಲಾಗಿತ್ತು. ನೋಟಿಸ್ಗೆ ಸರಿಯಾಗಿ ಸ್ಪಂದಿಸದೆ ನೀಡದಿರುವುದರಿಂದ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.