ಹುಬ್ಬಳ್ಳಿ: ‘ಭಾವೈಕ್ಯ ಮತ್ತು ಅಧ್ಯಾತ್ಮ ಜ್ಞಾನ ಭಾರತದ ಉಸಿರು. ಭಾರತೀಯ ಸಂಸ್ಕೃತಿ ಎಲ್ಲರನ್ನು ಒಗ್ಗೂಡಿಸುವುದೇ ಹೊರತು ವಿಘಟಿಸುವುದಲ್ಲ. ದೇಶ ಮತ್ತು ಧರ್ಮ ಉಳಿದರೆ ಮಾತ್ರ ಸುಖ, ಶಾಂತಿ ಪ್ರಾಪ್ತಿ. ಅವೆರಡೂ ಮನುಷ್ಯನ ಎರಡು ಕಣ್ಣುಗಳಿದ್ದಂತೆ’ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಸುಳ್ಳ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡ ಕಲ್ಮೇಶ್ವರ ದೇವಸ್ಥಾನದ ಉದ್ಘಾಟನೆ, ಕಳಸಾರೋಹಣ ಹಾಗೂ ಶ್ರೀ ಗುರು ಸಿದ್ಧರಾಮೇಶ್ವರ ಮಂಗಲ ಭವನ ಉದ್ಘಾಟನೆ ಅಂಗವಾಗಿ ಸೋಮವಾರ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

‘ಪ್ರಗತಿಪರ ವಿಚಾರಗಳು ಜೀವನದ ವಿಕಾಸಕ್ಕಾಗಿ ಇರಬೇಕೇ ಹೊರತು ಅವನತಿಗಲ್ಲ. ದೇವರು, ಧರ್ಮ ಗುರುವಿನ ಮೇಲಿನ ನಂಬಿಕೆಯು ಮನುಷ್ಯನ ಬಾಳಿಗೆ ಶಾಶ್ವತ ನಂದಾದೀಪ. ರೇಣುಕಾಚಾರ್ಯರು ಮೌಲ್ಯಾಧಾರಿತ ತತ್ವ, ಸಿದ್ಧಾಂತಗಳನ್ನು ಬೋಧಿಸಿ ಸಕಲರನ್ನು ಉದ್ಧರಿಸಿದ್ದಾರೆ. ಸುಳ್ಳ ಗ್ರಾಮದಲ್ಲಿ ಪುರಾತನ ಕಲ್ಮೇಶ್ವರ ದೇವಸ್ಥಾನವನ್ನು ಅಭಿವೃದ್ಧಿಪಡಿಸಿ, ಕಳಸಾರೋಹಣ ನೆರವೇರಿಸುತ್ತಿರುವುದು ಸಂತಸದ ಸಂಗತಿ’ ಎಂದರು.

ಸಾನ್ನಿಧ್ಯ ವಹಿಸಿದ್ದ ಉಜ್ಜಯಿನಿ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ‘ಮನುಷ್ಯನ ಶ್ರೇಯಸ್ಸಿಗೆ ಧರ್ಮಾಚರಣೆ ಮುಖ್ಯ. ಸಾತ್ವಿಕ, ತಾತ್ವಿಕ ಮತ್ತು ಸಾಮಾಜಿಕ ಚಿಂತನೆಯ ಬೋಧನೆ ಮೂಲಕ ಪಂಚಾಚಾರ್ಯರು ಭಾವೈಕ್ಯದ ಸೇತುವೆ ನಿರ್ಮಿಸಿದ್ದನ್ನು ಮರೆಯಲಾಗದು’ ಎಂದು ತಿಳಿಸಿದರು.

ಕಾಶಿ ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಮಾತನಾಡಿ, ‘ಸಂಸ್ಕಾರ, ಸದ್ವಿಚಾರಗಳ ಪರಿಪಾಲನೆಯಿಂದ ಜೀವನ ಸಮೃದ್ಧಗೊಳ್ಳುವುದು’ ಎಂದರು.

ಕಾಶಿ ವಿಶ್ವಾರಾಧ್ಯ ಮಲ್ಲಿಕಾರ್ಜುನ ಶ್ರೀ, ಸುಳ್ಳ ಪಂಚಗೃಹ ಹಿರೇಮಠದ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.

ಸಮಾರಂಭಕ್ಕೂ ಮುನ್ನ ರಂಭಾಪುರಿ, ಉಜ್ಜಯಿನಿ ಹಾಗೂ ಕಾಶಿ ಉಭಯ ಶ್ರೀಗಳ ಅಡ್ಡಪಲ್ಲಕ್ಕಿ ಮಹೋತ್ಸವ ಸಂಭ್ರಮದಿಂದ ಜರುಗಿತು. ಸಂಜೆ ಕಲ್ಮೇಶ್ವರ ಪಲ್ಲಕ್ಕಿ ಮಹೋತ್ಸವ ಹಾಗೂ ರಥೋತ್ಸವ ಅದ್ದೂರಿಯಾಗಿ ನೆರವೇರಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-24-480719656

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.