ಹುಬ್ಬಳ್ಳಿ: ವಿದ್ಯಾನಗರದ ಎಜಿಎಂಎಂ ಹಾಸ್ಟೆಲ್ ಆವರಣದಲ್ಲಿ ಮೇ 29 ಮತ್ತು ಮೇ 30ರಂದು ಅಖಿಲ ಭಾರತ ಮಾಧ್ವ ಮಹಾ ಮಂಡಳ ವಿದ್ಯಾರ್ಥಿ ನಿಲಯದ ಷಷ್ಠಿಪೂರ್ತಿ ಮಹೋತ್ಸವ ಹಾಗೂ ನವೀಕೃತ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮೇ 29ರಂದು ಸಂಜೆ 5.30ಕ್ಕೆ ಹಳೇ ಆದಾಯ ತೆರಿಗೆ ಕಚೇರಿ ರಸ್ತೆಯ ಮಾರುತಿ ಮಂದಿರದಿಂದ ಎಜಿಎಂಎಂ ವಿದ್ಯಾರ್ಥಿ ನಿಲಯದವರೆಗೆ ಮೆರವಣಿಗೆ ನಡೆಯಲಿದೆ. ಸಂಜೆ 7ಕ್ಕೆ ನವೀಕೃತ ಕೊಠಡಿಗಳ ಉದ್ಘಾಟನೆ ನಡೆಯಲಿದೆ. 7.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ.

ಮೇ 30ರಂದು ಬೆಳಿಗ್ಗೆ 9.30ಕ್ಕೆ ಸಂಸ್ಥಾನ ಪೂಜೆ. 11ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ. ಸಂಜೆ 6ಕ್ಕೆ ಪಂ.ಅನಂತ ಕುಲಕರ್ಣಿ ಅವರಿಂದ ದಾಸವಾಣಿ ಕಾರ್ಯಕ್ರಮ ನಡೆಯಲಿದೆ.

ಸುಬುಧೇಂದ್ರ ತೀರ್ಥ ಸ್ವಾಮೀಜಿ ಹಾಗೂ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರು ಎರಡೂ ದಿನದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಾನ್ನಿಧ್ಯ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-24-1655965540

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.