ಹುಬ್ಬಳ್ಳಿ: ‘ತಾಲ್ಲೂಕಿನ ಸುಳ್ಳ ಗ್ರಾಮದಲ್ಲಿ ಏ.27ರಂದು ಬೆಳಿಗ್ಗೆ 10.30ಕ್ಕೆ ಪಂಚಪೀಠಾಧೀಶ್ವರರ ಅಡ್ಡ ಪಲ್ಲಕ್ಕಿ ಮಹೋತ್ಸವ ಹಾಗೂ ಪಂಚಾಚಾರ್ಯರ ದಿವ್ಯ ಸಾನ್ನಿಧ್ಯದಲ್ಲಿ ಧರ್ಮಸಭೆ ನಡೆಯಲಿದೆ’ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೆಶ್ವರ ಸ್ವಾಮೀಜಿ ಹೇಳಿದರು.

ವಿದ್ಯಾನಗರದ ರಂಭಾಪುರಿ ಸಮುದಾಯ ಭವನದಲ್ಲಿ ಶನಿವಾರ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವದ ಭಿತ್ತಿಪತ್ರ ಹಾಗೂ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

‘ಸುಳ್ಳ ಗ್ರಾಮದಲ್ಲಿ ಏ.23ರಿಂದ 28ರ ವರೆಗೆ ಜಾತ್ರಾಮಹೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಏ.27ರಂದು ರಂಭಾಪುರಿ, ಉಜ್ಜಯಿನಿ, ಶ್ರೀಶೈಲ ಮತ್ತು ಕಾಶಿ ಸ್ವಾಮೀಜಿಗಳ ಅಡ್ಡಪಲ್ಲಕ್ಕಿ ಮಹೋತ್ಸವ ನಡೆಯಲಿದೆ’ ಎಂದರು.

‘ಸುಳ್ಳ ಗ್ರಾಮದಲ್ಲಿ ಪುನರ್ ನಿರ್ಮಾಣಗೊಂಡ ಕಲ್ಮೇಶ್ವರ ದೇವಸ್ಥಾನ ಉದ್ಘಾಟನೆ ಜೊತೆಗೆ ಕಳಸಾರೋಹಣ, ಗುರು ಸಿದ್ಧರಾಮೇಶ್ವರ ಮಂಗಲ ಭವನ ಉದ್ಘಾಟನೆ, ಕಲ್ಮೇಶ್ವರ ಪಲ್ಲಕ್ಕಿ ಉತ್ಸವ, ಮಹಾರಥೋತ್ಸವ, ಜೀವನ ದರ್ಶನ ಪ್ರವಚನ ಮತ್ತು ಧರ್ಮ ಜಾಗೃತಿ ಸಮಾವೇಶವೂ ನಡೆಯಲಿದೆ. ಇದೇ ಮೊದಲ ಬಾರಿಗೆ ಸುಳ್ಳ ಗ್ರಾಮದಲ್ಲಿ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ನಡೆಯುತ್ತಿರುವುದು. ನಾಡಿನ ಅನೇಕ ಶಿವಾಚಾರ್ಯರು, ಪಂಚ ಪೀಠದ ಸ್ವಾಮೀಜಿಗಳು ಮತ್ತು ಸಾಧಕರು ಕಾರ್ಯಕ್ರಮಗಳಲ್ಲಿ ಭಾಗಿಯಾಗುವರು’ ಎಂದು ತಿಳಿಸಿದರು.

ಸುಳ್ಳ ಪಂಚಗೃಹ ಹಿರೇಮಠದ ಪಟ್ಟಾಧ್ಯಕ್ಷ ಶಿವ ಸಿದ್ಧರಾಮೇಶ್ವರ ಶಿವಾಚಾರ್ಯರು ಅಧ್ಯಕ್ಷತೆ ವಹಿಸಿದ್ದರು. ಹಳ್ಯಾಳ ಮತ್ತು ಹಳೇ ಹುಬ್ಬಳ್ಳಿ ಹಿರೇಮಠದ ನಿಯೋಜಿತ ಉತ್ತರಾಧಿಕಾರಿ ರೇಣುಕ ಪ್ರಸಾದ ದೇವರು, ಮದ್ವೀರಶೈವ ಸದ್ಭೋಧನಾ ಸಂಸ್ಥೆಯ ಪ್ರಕಾಶ ಬೆಂಡಿಗೇರಿ, ವಿಶ್ವನಾಥ ಹಿರೇಗೌಡರ ಹಾಗೂ ಕಿರಣಕುಮಾರ ದಂಪತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-24-335894819

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.