ಹುಬ್ಬಳ್ಳಿ: ತಾಲ್ಲೂಕಿನ ಸುಳ್ಳ ಗ್ರಾಮದಲ್ಲಿ ಏಪ್ರಿಲ್ 27ರಂದು ಬೆಳಿಗ್ಗೆ 10.30ಕ್ಕೆ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗಲಿದೆ ಎಂದು ಸುಳ್ಳ ಪಂಚಗ್ರಹ ಹಿರೇಮಠದ ಪಟ್ಟಾಧ್ಯಕ್ಷ ಶಿವಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

‘ಕಲ್ಮೇಶ್ವರ ದೇವರು ಮತ್ತು ಗುರು ಸಿದ್ದರಾಮೇಶ್ವರ ದೇವರಿಗೆ ಬೆಳಿಗ್ಗೆ 7 ಗಂಟೆಯಿಂದ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಹಾಮಂಗಳಾರತಿ ಜರುಗಲಿದೆ. ಜೀರ್ಣೋದ್ಧಾರಗೊಂಡ ಕಲ್ಮೇಶ್ವರ ದೇವಸ್ಥಾನದ ಉದ್ಘಾಟನೆ, ಕಳಸಾರೋಹಣ, ಗುರು ಸಿದ್ಧರಾಮೇಶ್ವರ ಮಂಗಲ ಭವನದ ಉದ್ಘಾಟನೆ 10 ಗಂಟೆಗೆ ನಡೆಯಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಅಡ್ಡಪಲ್ಲಕ್ಕಿ ಮಹೋತ್ಸವದಲ್ಲಿ ಮಹಿಳೆಯರಿಂದ ಪೂರ್ಣಕುಂಭ, ಆರತಿ, ದೀಪೋತ್ಸವ ಇರಲಿದೆ. ಕಲ್ಮೇಶ್ವರ ಪಲ್ಲಕ್ಕಿ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಲಿದೆ. ಸಂಜೆ 5 ಗಂಟೆಗೆ ಕಲ್ಮೇಶ್ವರ ದೇವರ ರಥೋತ್ಸವ, 7.30ಕ್ಕೆ ಜನ ಜಾಗೃತಿ ಧರ್ಮ ಸಮಾರಂಭ ನೆರವೇರುವುದು. ನಾಡಿನ ವಿವಿಧ ಸ್ವಾಮೀಜಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-24-1438585992

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.