ಹುಬ್ಬಳ್ಳಿ: ಹುಬ್ಬಳ್ಳಿ–ಭಗತ್ ಕಿ ಕೋಥಿ ನಡುವೆ (ಜೋಧಪುರ ಎಕ್ಸ್ಪ್ರೆಸ್) ವಿಶೇಷ ರೈಲು ಸಂಚಾರವನ್ನು ಪುನರಾರಂಭಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನೈರುತ್ಯ ರೈಲ್ವೆ ವಲಯ ಬಳಕೆದಾರರ ಸಲಹಾ ಸಮಿತಿ ಸದಸ್ಯ ಮಹೇಂದ್ರ ಸಿಂಘಿ ಅವರು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಈ ರೈಲು ಸಂಚಾರವನ್ನು ರದ್ದುಪಡಿಸಿರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಶೀಘ್ರ ಪುನರಾರಂಭಿಸಬೇಕು ಎಂದು ಒತ್ತಾಯಿಸಿದರು.

ರದ್ದುಗೊಂಡಿರುವ ಹುಬ್ಬಳ್ಳಿ–ವಾಟ್ವಾ ವಿಶೇಷ ರೈಲು (07333) ಪುನರಾರಂಭಿಸುವ ಜತೆಗೆ, ಹುಬ್ಬಳ್ಳಿಯಿಂದ ಕೋಪೆಗಾಂವ್ಗೆ ನೇರ ರೈಲು ಸಂಚಾರ ಆರಂಭಿಸಬೇಕು. ಮಂತ್ರಾಲಯಕ್ಕೆ ಸಾಕಷ್ಟು ಭಕ್ತರು ಹೋಗುತ್ತಾರೆ. ಕೋವಿಡ್ ಸಂದರ್ಭದಲ್ಲಿ ಧಾರವಾಡದಿಂದ ಮಂತ್ರಾಲಯಕ್ಕೆ ಇದ್ದ ರೈಲು ಸಂಚಾರವನ್ನು ರದ್ದುಪಡಿಸಲಾಗಿದ್ದು, ಅದನ್ನು ಪುನರಾರಂಭಿಸಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.