ಹುಬ್ಬಳ್ಳಿ: ಇಲ್ಲಿನ ಉಣಕಲ್ ಗ್ರಾಮದಲ್ಲಿ ದ್ಯಾಮವ್ವ ಹಾಗೂ ದುರ್ಗವ್ವ ದೇವಿಯರ ನೂತನ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ನೂತನ ದೇವಸ್ಥಾನದ ಉದ್ಘಾಟನಾ ಸಮಾರಂಭ ಏಪ್ರಿಲ್ 27ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.

ಶ್ರೀನಗರ ಕ್ರಾಸ್ನಿಂದ ಸಾಯಿನಗರ ಮಾರ್ಗವಾಗಿ ಚೌಕಿಮನೆ ಕೂಗುಬಸಪ್ಪನ ಕಟ್ಟೆವರೆಗೆ 2,001 ಮಹಿಳೆಯರು ಪೂರ್ಣಕುಂಭ ಹೊತ್ತು ಮೆರವಣಿಗೆಯಲ್ಲಿ ಸಾಗುವರು. ಅಂದಿನಿಂದ ಮೇ 1ರವರೆಗೆ ಪೂಜಾ ಕಾರ್ಯಕ್ರಮಗಳು ಜರುಗಲಿವೆ. ಏ. 30ರಂದು ಹೊಮ, ವಾದ್ಯಮೇಳದೊಂದಿಗೆ ದೇವತೆಯರ ಮೂರ್ತಿಗಳ ಮೆರವಣಿಗೆ, ಹೊನ್ನಾಟ ನೆರವೇರಲಿದೆ. ಮೇ 1ರಂದು ಸುಳ್ಳ ಪಂಚಗ್ರಹ ಸಂಸ್ಥಾನ ಹಿರೇಮಠದ ಶಿವಸಿದ್ಧರಾಮ ಶಿವಯೋಗಿ ಸ್ವಾಮೀಜಿ ಸಮ್ಮುಖದಲ್ಲಿ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಪ್ರತಿದಿನ ಪ್ರಸಾದ ವ್ಯವಸ್ಥೆ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-24-479083074

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.