ಹುಬ್ಬಳ್ಳಿ: ಇಲ್ಲಿನ ಉಣಕಲ್ನಲ್ಲಿ ನೂತನವಾಗಿ ನಿರ್ಮಿಸಿದ ದೇವಸ್ಥಾನದ ಉದ್ಘಾಟನೆ ಹಾಗೂ ಗ್ರಾಮದೇವಿಯರ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಅಂಗವಾಗಿ ಸೋಮವಾರದಿಂದ ವಿವಿಧ ಕಾರ್ಯಕ್ರಮಗಳು ಆರಂಭವಾದವು.

ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಾತ್ರಾ ಉತ್ಸವ ಸಮಿತಿಯ ಗಂಗಾಧರ ದೊಡವಾಡ, ‘ದಾಂಡೇಲಿಯಲ್ಲಿ ನಿರ್ಮಿಸಿದ ದ್ಯಾಮವ್ವ ಹಾಗೂ ದುರ್ಗಾದೇವಿಯರ ಮೂರ್ತಿಗಳನ್ನು ಮೆರವಣಿಗೆಯಲ್ಲಿ ಗ್ರಾಮದೇವಿಯ ಚೌಕಿಮನೆಗೆ ತರಲಾಯಿತು. ಚೌಕಿಮನೆಯಲ್ಲಿ ದೇವಿಯರಿಗೆ ನಿರಂತರ ಪೂಜೆ ಸಲ್ಲಿಸಲಾಗುತ್ತದೆ’ ಎಂದರು.

‘ಏಪ್ರಿಲ್ 29ರಂದು ದುರ್ಗಾದೇವಿ ದೇವಸ್ಥಾನದ ಬಯಲಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. 30ರಂದು ಪೂಜೆ, ವಿವಿಧ ಹವನಗಳು ಜರುಗಲಿವೆ. ದೇವಿಯರ ಮೆರವಣಿಗೆ, ಹೊನ್ನಾಟ ನೆರವೇರಲಿದೆ. ಮೇ 1ರಂದು ಶಿವಸಿದ್ದರಾಮ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿಯಿಂದ ದೇವಿಯರ ಪ್ರಾಣ ಪ್ರತಿಷ್ಠಾಪನೆ, ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗುವುದು. ನಿತ್ಯ ಮಧ್ಯಾಹ್ನ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿದೆ’ ಎಂದು ಹೇಳಿದರು.

ಪರಪ್ಪ ಮೆಣಸಿನಕಾಯಿ, ಬಸವರಾಜ ಹದ್ಲಿ, ರಾಘವೇಂದ್ರ ದೇವಿಶೆಟ್ಟಿ, ಈರಣ್ಣ ಚಪ್ಪರಮನಿ, ಕಿರಣ ಹದ್ಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-24-986824578

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.