ಹುಬ್ಬಳ್ಳಿಯ ಮಹಾನಗರ ಪಾಲಿಕೆ ಕಚೇರಿ ಎದುರು ಮಹಿಳೆಯರು ಶುಕ್ರವಾರ ಸುರಿಯುತ್ತಿದ್ದ ಮಳೆಯಿಂದ ರಕ್ಷಿಸಿಕೊಳ್ಳಲು ಛತ್ರಿ ಹಿಡಿದು ರಸ್ತೆ ದಾಟುವುದು ಗಮನ ಸೆಳೆಯಿತು
ಪ್ರಜಾವಾಣಿ ಚಿತ್ರ/ ಗುರು ಹಬೀಬ
ಕೃಷಿ ಕಾರ್ಯಕ್ಕೆ ಅಡ್ಡಿ
ತುಂತುರು ಸುರಿಯುತ್ತಿರುವ ಮಳೆಯಿಂದಾಗಿ ರೈತರು ಕೃಷಿ ಕಾರ್ಯ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ‘ಮೋಡ ಕವಿದ ವಾತಾವರಣ ತುಂತುರು ಮಳೆ ಹಾಗೂ ಬಿಸಿಲಿನ ಅಭಾವದಿಂದ ಹೆಸರು ಸೋಯಾಬಿನ್ ಹತ್ತಿ ಬೆಳೆಗಳಲ್ಲಿ ಕೀಟಬಾಧೆ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗುತ್ತದೆ. ಗೋವಿನಜೋಳ ಕಬ್ಬು ಇಂತಹ ಬೆಳೆಗಳಿಗೆ ಮಳೆಯಿಂದ ಯಾವುದೇ ತೊಂದರೆ ಆಗುವುದಿಲ್ಲ’ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಹವಾಮಾನ ತಜ್ಞ ರವಿ ಪಾಟೀಲ ತಿಳಿಸಿದರು.