ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಕೆಎಂಸಿಆರ್ಐನಲ್ಲಿ ಅಂದಾಜು ₹2 ಕೋಟಿಗೂ ಅಧಿಕ ಮೊತ್ತದ ವೈಟ್ ಟ್ಯಾಪಿಂಗ್ ರಸ್ತೆ ಕಾಮಗಾರಿಗಳಿಗೆ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.

‘ಕೆಎಂಸಿಆರ್ಐ ಘಟಕದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದು, ರಸ್ತೆ ನೀರು ಗಟಾರಗಳು ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸಲು ಬದ್ಧನಿದ್ದೇನೆ’ ಎಂದು ಶಾಸಕರು ತಿಳಿಸಿದರು.

‘ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಸಾಕಷ್ಟು ನೆರವು ಸಿಗುತ್ತಿದ್ದು, ರಾಜ್ಯ ಸರ್ಕಾರವೂ ನೆರವನ್ನು ನೀಡುತ್ತಿದೆ. ಏಳು ಜಿಲ್ಲೆಗಳಿಂದ ರೋಗಿಗಳು ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಇಲ್ಲಿಗೆ ಬರುತ್ತಾರೆ. ಬಡ ರೋಗಿಗಳಿಗೆ ಉತ್ತಮ ಸೇವೆ ಸಿಗಬೇಕು. ಆ ಬಗ್ಗೆ ಕಾಳಜಿ ವಹಿಸಬೇಕಿದೆ’ ಎಂದರು.

ಕೆಎಂಸಿಆರ್ಐ ಅಧೀಕ್ಷಕ ಈಶ್ವರ ಹೊಸಮನಿ, ಸೂಪರಿಡೆಂಟ್ ಹಸಬಿ, ಬಿಜೆಪಿ ಮುಖಂಡ ಲಿಂಗರಾಜ್ ಪಾಟೀಲ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-24-667773780

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.