ಭಾನುವಾರ, ಜೂನ್ 26, 2022
21 °C

ಹಳೇ ಹುಬ್ಬಳ್ಳಿ ಗಲಭೆ: 7 ಮಂದಿಗೆ ಜಾಮೀನು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ತಿಂಗಳ ಹಿಂದೆ ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾದ 156 ಆರೋಪಿಗಳಲ್ಲಿ ಏಳು ಮಂದಿಗೆ ಜಾಮೀನು ದೊರೆತಿದೆ.

ಸೋಮವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ  ವಿದ್ಯಾರ್ಥಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿದೆ.

ಜಾಮೀನಿಗೆ 148 ಮಂದಿಯಿಂದ ಅರ್ಜಿ ಸಲ್ಲಿಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಪಿಯುಸಿ, ಪದವಿ ಶೈಕ್ಷಣಿಕ ಹಿನ್ನೆಲೆಯಲ್ಲಿ ಆರು ಮಂದಿಗೆ ಹಾಗೂ ವೈದ್ಯಕೀಯ ಶಿಕ್ಷಣದ ಹಿನ್ನೆಲೆಯಲ್ಲಿ ಒಬ್ಬರಿಗೆ ಜಾಮೀನು ನೀಡಿದೆ ಎಂದು ಆರೋಪಿ ಪರ ವಾದ ಮಂಡಿಸಿದ್ದ ವಕೀಲ ಬಿ.ಆರ್. ಮಹ್ಮದನವರ್ ತಿಳಿಸಿದರು.

ಜಾಮೀನು ಮೇಲೆ ಬಿಡುಗಡೆಯಾದವರು ಬಳ್ಳಾರಿ, ಮೈಸೂರು, ಕಲಬುರ್ಗಿ ಮತ್ತು ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು