ಹುಬ್ಬಳ್ಳಿ: ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ರದ್ದುಪಡಿಸಬೇಕು. ಈ ಬಗ್ಗೆ ಹೋರಾಟ ರೂಪಿಸಬೇಕಾದ ಅಗತ್ಯ ಇದೆ’ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಸ್ಐಆರ್ ಬಗ್ಗೆ ಕಳೆದ ಮೂರ್ನಾಲ್ಕು ತಿಂಗಳಿಂದ ಚರ್ಚೆ ನಡೆಯುತ್ತಿದೆ. ಆರಂಭದಲ್ಲಿಯೇ ಇದನ್ನು ವಿರೋಧಿಸದಿದ್ದರೆ ಮುಂದೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ. ಇದನ್ನು ವಿರೋಧಿಸಿ ಹೋರಾಟ ಮಾಡುವವವರಿಗೆ ಬೆಂಬಲ ನೀಡಲಾಗುವುದು’ ಎಂದರು.

‘ಕೇಂದ್ರ ಸರ್ಕಾರ ತನ್ನ ಹಿತಾಸಕ್ತಿಯನ್ನು ಎಸ್ಐಆರ್ ಮೂಲಕ ಕಾರ್ಯಾಚರಣೆಗ ತರಲು ಮುಂದಾಗಿದೆ. ಮುಖ್ಯ ಚುನಾವಣಾ ಆಯುಕ್ತರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಅವರು, ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸುವಲ್ಲಿ ವಿಫಲರಾಗಿದ್ದಾರೆ. ಚುನಾವಣಾ ಆಯೋಗವು ಕಾರ್ಯಾಂಗದ ಹಿಡಿತದಲ್ಲಿ ಇರಬಾರದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.