ಹುಬ್ಬಳ್ಳಿ: ‘ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮತ್ತೊಮ್ಮೆ ಮಂಡಿಸಲಿದ್ದು, ಅದನ್ನು ಯಾರಿಗೂ ಸಹ ತಡೆಯಲಾಗದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

‘ನಾರಿಶಕ್ತಿ ವಂದನಾ ಅಧಿನಿಯಮ (ಮಹಿಳಾ ಮೀಸಲಾತಿ ಮಸೂದೆ) ಜಾರಿಯಾಗದಂತೆ ತಡೆದ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳ ವಿರುದ್ಧ ಇಲ್ಲಿ ಶುಕ್ರವಾರ ಬಿಜೆಪಿ ಮಹಿಳಾ ಮೋರ್ಚಾ ಹಮ್ಮಿಕೊಂಡಿದ್ದ ಜನಾಕ್ರೋಶ ಪಾದಯಾತ್ರೆ ಹಾಗೂ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

‘ಮಹಿಳೆಯರಿಗೆ ಮೀಸಲಾತಿ ದೊರೆಯುವುದನ್ನು ಸಹಿಸಲಾಗದೆ ಕಾಂಗ್ರೆಸ್, ಮಿತ್ರ ಪಕ್ಷಗಳೊಂದಿಗೆ ಸೇರಿ ಷಡ್ಯಂತ್ರ ನಡೆಸಿದೆ. ಕಾಂಗ್ರೆಸ್ ಮಾಡುತ್ತಿರುವ ಅನ್ಯಾಯ ಎಲ್ಲರಿಗೂ ತಿಳಿಸಬೇಕಿದೆ’ ಎಂದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ‘ಮಹಿಳಾ ಮೀಸಲಾತಿ ಜೊತೆಗೆ ಕ್ಷೇತ್ರ ಮರುವಿಂಗಡಣೆ ಮಸೂದೆ ಮಂಡಿಸಲಾಗಿತ್ತು. ಅದರಿಂದ 850 ಮತ ಕ್ಷೇತ್ರಗಳಾಗಿ, ಶೇ 33ರಷ್ಟು ಮಹಿಳೆಯರಿಗೆ ಅವಕಾಶವೂ ಸಿಗುತ್ತಿತ್ತು. ಆದರೆ, ತಮ್ಮ ಸ್ಥಾನ ಕಡಿಮೆಯಾದ ಆತಂಕದಿಂದ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ’ ಎಂದು ದೂರಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ‘ಕ್ಷೇತ್ರ ಮರುವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ಕುರಿತು 30 ವರ್ಷಗಳಿಂದ ಚರ್ಚೆ ನಡೆದಿದೆ. ಕಾಂಗ್ರೆಸ್ ಭಾಷಣ ಮಾಡುತ್ತಿದೆಯೇ ಹೊರತು, ಮಸೂದೆ ಜಾರಿಗೆ ಯತ್ನಿಸುತ್ತಿಲ್ಲ. ಎಚ್.ಡಿ. ದೇವೇಗೌಡರು ಪ್ರಧಾನ ಮಂತ್ರಿಯಾಗಿದ್ದಾಗ ಮಸೂದೆಗೆ ಕಾಂಗ್ರೆಸ್ ವಿರೋಧಿಸಿತ್ತು. ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ವಿರೋಧ ಪಕ್ಷದ ನಾಯಕಿ ಸೋನಿಯಾ ಗಾಂಧಿ ವಿರೋಧಿಸಿದ್ದರು’ ಎಂದು ತಿಳಿಸಿದರು.

ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ, ಮುಖಂಡರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ, ಎಸ್.ವಿ. ಸಂಕನೂರ, ಭಾರತಿ ಶೆಟ್ಟಿ, ಎಂ.ಆರ್. ಪಾಟೀಲ ಹಾಗೂ ಸಿ.ಸಿ. ಪಾಟೀಲ, ರೂಪಾಲಿ ನಾಯ್ಕ, ನಾಗರಾಜ ಛಬ್ಬಿ, ಶಂಕರಪಾಟೀಲ ಮುನೇನಕೊಪ್ಪ, ಅಮೃತ ದೇಸಾಯಿ ಮೊದಲಾವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.