ಹುಬ್ಬಳ್ಳಿ: ‘ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ವಿರೋಧವಿಲ್ಲ. ಆದರೆ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ವಿರೋಧವಿದೆ’ ಎಂದು ಭಟ್ಕಳ ಕ್ಷೇತ್ರದ ಮಾಜಿ ಶಾಸಕ ಜೆ.ಡಿ.ನಾಯ್ಕ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲೋಕಸಭಾ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಮಂಡಿಸದೇ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಯೊಂದನ್ನೇ ಸದನದಲ್ಲಿ ಮಂಡಿಸಿದ್ದರೆ ಅಂಗೀಕಾರವಾಗುತ್ತಿತ್ತು’ ಎಂದು ಹೇಳಿದರು.

‘ಎರಡೂ ಮಸೂದೆಗಳನ್ನು ಒಟ್ಟಿಗೆ ತಂದ ಪರಿಣಾಮ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲುಂಟಾಯಿತು. ಕಾಂಗ್ರೆಸ್ ಎಂದಿಗೂ ಮಹಿಳಾ ಮೀಸಲಾತಿ ವಿರೋಧಿಯಲ್ಲ. ಈ ಮಸೂದೆ ಬೆಂಬಲಿಸುತ್ತದೆ’ ಎಂ ದರು.

‘ಮತದಾರರ ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ಇದನ್ನು ವಿರೋಧಿಸುತ್ತಿದೆ. ಕೇಂದ್ರ ಸರ್ಕಾರವು ಈ ಮಸೂದೆಯನ್ನು ಪುನರ್ ಪರಿಶೀಲಿಸಬೇಕು’ ಎಂದು ಆಗ್ರಹಿಸಿದರು.

ಸತೀಶ್ ಮೆಹರವಾಡೆ, ಚಂದ್ರಶೇಖರ ಜುಟ್ಟಲ್, ನೆಹರೂ ಪಾಟೀಲ್, ವಿಶ್ವನಾಥ ಕುಲಕರ್ಣಿ, ಮೋಹನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-24-1473730958

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.