ಹುಬ್ಬಳ್ಳಿ: ‘ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕೆರೆಗಳನ್ನು ಭರ್ತಿ ಮಾಡಿಕೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಉಲ್ಬಣವಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ‘ಜಲಜೀವನ ಮಿಷನ್ ಯೋಜನೆಯಡಿ ನಳಗಳನ್ನು ಸರಿಯಾದ ರೀತಿಯಲ್ಲಿ ಅಳವಡಿಸದೇ ಇರುವುದು ಗಮನಕ್ಕೆ ಬಂದಿದೆ. ಸರಿಪಡಿಸಬೇಕು. ಅವಶ್ಯ ಇರುವ ಕಡೆ ಬೋರ್ವೆಲ್ ಕೊರೆಯಿಸಿ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸಬೇಕು. ಕೆರೆಗಳ ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಫೆಬ್ರುವರಿ ಅಂತ್ಯದೊಳಗೆ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಶಾಲಾ ಮಕ್ಕಳಿಗೆ ಶುಚಿಯಾದ ಬಿಸಿಯೂಟ ದೊರೆಯಬೇಕು. ಅಡುಗೆ ಸಹಾಯಕರಿಗೆ ಅಗತ್ಯ ತರಬೇತಿ ನೀಡಬೇಕು. ಶಾಲಾ ಆವರಣದಲ್ಲಿ ಪೌಷ್ಟಿಕ ಆಹಾರದ ಸಸಿಗಳನ್ನು ನೆಡುವ ಮೂಲಕ ‘ಪೌಷ್ಟಿಕ ವನ’ ನಿರ್ಮಿಸಬೇಕು. ಇದರೊಂದಿಗೆ ಹೆದ್ದಾರಿ, ಗ್ರಾಮೀಣ ಪ್ರದೇಶದ ರಸ್ತೆ, ಸರ್ಕಾರಿ ಕಚೇರಿ, ಶಾಲೆಗಳ ಆವರಣದಲ್ಲಿ ಸಸಿಗಳನ್ನು ನೆಟ್ಟು, ಪೋಷಿಸಬೇಕು’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪೂರ್ವಭಾವಿ ಪರೀಕ್ಷೆಗಳು ನಡೆಯುತ್ತಿವೆ. ವಿದ್ಯಾರ್ಥಿಗಳು ಕಲಿಕೆ ಕಡೆಗೆ ಹೆಚ್ಚಿನ ಆಸಕ್ತಿ ವಹಿಸುವಂತೆ ನೋಡಿಕೊಳ್ಳಬೇಕು. ಅಂಗನವಾಡಿ ಕಟ್ಟಡ, ಶಾಲಾ ಕಟ್ಟಡ, ಶೌಚಾಲಯಗಳ ನಿರ್ಮಾಣಕ್ಕೆ ಗಮನಹರಿಸಬೇಕಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ದೀಪಗಳನ್ನು ಅಳವಡಿಸಬೇಕು. ಸ್ಮಶಾನಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸಬೇಕು’ ಎಂದು ತಿಳಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆ ಪ್ರಗತಿ ವರದಿಯನ್ನು ಸಭೆಯ ಗಮನಕ್ಕೆ ತಂದರು.

ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಚಂದ್ರಶೇಖರ ಕುರ್ತಕೋಟಿ, ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ಸಿ.ಆರ್.ಕೌಜಗೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ನಾಗರತ್ನಾ ಕ್ಯಾಸನೂರ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಡಾ.ಸಂಗಮೇಶ ಬಂಗಾರಿಮಠ, ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕಿ ಮಂಜುಳಾ ತೆಂಬದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪಿಡಿಒಗಳು ಹಾಜರಿದ್ದರು.

ಅಗತ್ಯವಿರುವ ಕಡೆ ಬೋರ್ವೆಲ್ ಕೊರೆಯಿಸಿ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸಬೇಕು. ಕೆರೆಗಳ ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು.
ದೀಪಕ ಮಡಿವಾಳರ ಜಿ.ಪಂ.ಮುಖ್ಯ ಯೋಜನಾಧಿಕಾರಿ