ಹುಬ್ಬಳ್ಳಿ: ‘ಕೃತಕ ಬುದ್ಧಿಮತ್ತೆ ಸೇರಿದಂತೆ ಹೊಸ ಹೊಸ ಅವಿಷ್ಕಾರದೊಂದಿಗೆ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದೆ. ವಿದ್ಯಾರ್ಥಿಗಳು ನಿರಂತರ ಅಧ್ಯಯನ ಹಾಗೂ ಶೈಕ್ಷಣಿಕ ಕೌಶಲ ಬೆಳೆಸಿಕೊಂಡಲ್ಲಿ ಮಾತ್ರ ಪ್ರಗತಿ ಹೊಂದಲು ಸಾಧ್ಯ’ ಎಂದು ಕೆಎಲ್ಇ ಸಂಸ್ಥೆಯ ಬಿಸಿಎ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಸಿದ್ದಲಿಗಪ್ಪಾ ಸಿ.ಕಡಕೋಳ ಹೇಳಿದರು.

ನಗರದ ಕೆಎಲ್ಇ ಸಂಸ್ಥೆಯ ಬಿಸಿಎ ಮಹಾವಿದ್ಯಾಲಯದಲ್ಲಿ ಮಂಗಳವಾರ ಆಯೋಜಿಸಿದ್ದ ‘ಐ2 ಇ2 ತಾಂತ್ರಿಕ ಉತ್ಸವ–2025’ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ‘ಎಐ ತಂತ್ರಜ್ಞಾನ ಯುಗದಲ್ಲಿ ನೂತನ ಅವಿಷ್ಕಾರಗಳು ನಡೆಯುತ್ತಲೇ ಇರುತ್ತವೆ. ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳು ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕಿದೆ’ ಎಂದರು.

ಇದೇ ವೇಳೆ ಹಾಕ್ಯಥಾನ್ ಸಾಫ್ಟ್ವೇರ್, ಕೃತಕ ಬುದ್ಧಿಮತ್ತೆ, ಯಂತ್ರ ಕಲಿಕೆ ಮತ್ತು ಸೈಬರ್ ಸೆಕ್ಯೂರಿಟಿ ವಿಷಯ ಕುರಿತು ಹಲವು ಸ್ಪರ್ಧೆಗಳು ನಡೆದವು.

ಸ್ಪರ್ಧೆಯಲ್ಲಿ ಒಟ್ಟು 30 ತಂಡಗಳಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು.

ವಿದ್ಯಾರ್ಥಿನಿ ಆದಿತ್ಯಾ ಜಿ.ಕೊನ್ನೂರ ಸ್ವಾಗತಿಸಿದರು. ಸುರಕ್ಷಾ ಎಂ.ಬಿ. ವಂದಿಸಿದರು. ನಿಕಿತಾ ಪಾಟೀಲ, ಸ್ಪೂರ್ತಿ ಕೆ., ಮೈತ್ರಿ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.