ಮಂಗಳವಾರ, ಆಗಸ್ಟ್ 3, 2021
23 °C

ಹುಬ್ಬಳ್ಳಿ | ಆಲಮಟ್ಟಿ ಹೊರಹರಿವು ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದ ಹೊರಹರಿವು ಭಾನುವಾರ ಬೆಳಿಗ್ಗೆಯಿಂದ 45 ಸಾವಿರ ಕ್ಯುಸೆಕ್‌ಗೆ ಹೆಚ್ಚಿಸಲಾಗಿದೆ. ಜಲಾಶಯ ಭರ್ತಿಗೆ 2 ಮೀಟರ್‌ ಬಾಕಿ ಇದೆ. 

ಜಲಾಶಯದ ಮುಂಭಾಗದ ನದಿ ತೀರದ ಗ್ರಾಮಗಳಿಗೆ ಆಯಾ ತಾಲ್ಲೂಕು ಆಡಳಿತದ ಮೂಲಕ ನದಿ ತೀರಕ್ಕೆ ಹೋಗದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಭಾನುವಾರ 69,868 ಕ್ಯುಸೆಕ್ (6 ಟಿಎಂಸಿ ಅಡಿ) ನೀರು ಹರಿದು ಬಂದಿದೆ.

ಕೆಪಿಸಿಎಲ್‌ನ ಎಲ್ಲ ಘಟಕಗಳೂ ಕಾರ್ಯಾರಂಭ ಮಾಡಿದ್ದು, 255 ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕೃಷ್ಣಾ ನದಿಯ ಹರಿವು ಇಳಿಕೆಯಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ ಏಳು ಬ್ಯಾರೇಜ್‌ಗಳು ಸಂಚಾರಕ್ಕೆ ಮುಕ್ತವಾಗಿವೆ. ರಾಜಾಪುರ ಬ್ಯಾರೇಜ್‌ನಿಂದ 44,125 ಕ್ಯುಸೆಕ್ ಮತ್ತು ದೂಧ್‌ಗಂಗಾ ನದಿಯಿಂದ 10,912 ಕ್ಯುಸೆಕ್ ಸೇರಿ ಚಿಕ್ಕೋಡಿಯ ಕಲ್ಲೋಳ ಬಳಿ ಕೃಷ್ಣಾ ನದಿಗೆ 55,037 ಕ್ಯುಸೆಕ್ ನೀರು ಹರಿದು ಬರುತ್ತಿದೆ.

ಬಳ್ಳಾರಿ ಜಿಲ್ಲೆಯ ಹೊಸಪೇಟೆ ಬಳಿಯ ತುಂಗಭದ್ರಾ ಜಲಾಶಯದ ಒಳಹರಿವು ಐದು ದಿನಗಳ ನಂತರ ತಗ್ಗಿದೆ. ಧಾರವಾಡ, ಗದಗ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಿದೆ.

ಸಾಧಾರಣ ಮಳೆ: ಕೊಡಗು ಜಿಲ್ಲೆಯ ಮಡಿಕೇರಿ, ತಲಕಾವೇರಿ, ಭಾಗಮಂಡಲ ವ್ಯಾಪ್ತಿಯಲ್ಲಿ ಸಾಧಾರಣ ಮಳೆ ಸುರಿಯಿತು. ಕಲಬುರ್ಗಿ ನಗರದಲ್ಲಿ ಉತ್ತಮ ಮಳೆಯಾಯಿತು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು