ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ– ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ಹಾವೇರಿ, ರಾಣೆಬೆನ್ನೂರಲ್ಲಿ ನಿಲುಗಡೆ

Published 16 ಫೆಬ್ರುವರಿ 2024, 14:02 IST
Last Updated 16 ಫೆಬ್ರುವರಿ 2024, 14:02 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹುಬ್ಬಳ್ಳಿ ಮತ್ತು ಬೆಂಗಳೂರು ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ವಿಶೇಷ ರೈಲುಗಳ (07339–07340) ಸಂಚಾರ ಅವಧಿ ವಿಸ್ತರಣೆ ಹಾಗೂ ಮಹಾದೇವಪ್ಪ ಮೈಲಾರ ಹಾವೇರಿ ಮತ್ತು ರಾಣಿಬೆನ್ನೂರು ನಿಲ್ದಾಣಗಳಲ್ಲಿ ಹೆಚ್ಚುವರಿ ನಿಲುಗಡೆಗೆ ನೈರುತ್ಯ ರೈಲ್ವೆ ನಿರ್ಧರಿಸಿದೆ.

ಹುಬ್ಬಳ್ಳಿ-ಬೆಂಗಳೂರು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ವಿಶೇಷ ರೈಲು (07339) ಸೇವೆ ಮಾರ್ಚ್‌ 1ರಿಂದ ಜೂನ್ 30ರ ವರೆಗೆ, ಬೆಂಗಳೂರು ಹುಬ್ಬಳ್ಳಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ವಿಶೇಷ ರೈಲು (07340) ಸೇವೆಯನ್ನು ಮಾರ್ಚ್‌ 2ರಿಂದ ಜುಲೈ 1ರ ವರೆಗೆ ಸಂಚಾರ ಅವಧಿ ವಿಸ್ತರಿಸಲಾಗುತ್ತಿದ್ದು, ಎಸ್.ಎಂ.ಎಂ ಹಾವೇರಿ ಮತ್ತು ರಾಣಿಬೆನ್ನೂರು ನಿಲ್ದಾಣಗಳಲ್ಲಿ ಹೆಚ್ಚುವರಿ ನಿಲುಗಡೆ ಆಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT