ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಗಣೇಶಮೂರ್ತಿ ವಿಸರ್ಜನೆಗೆ ಕ್ಷಣಗಣನೆ ಆರಂಭವಾಗಿದ್ದು, ಅಂತಿಮ ಧಾರ್ಮಿಕ ವಿಧಾನಗಳು ನಡೆಯುತ್ತಿವೆ.

ಮುಂಜಾಗ್ರತಾ ಕ್ರಮವಾಗಿ ಮೈದಾನದ ಸುತ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಾಲ್ವರು ಎಸಿಪಿ ನೇತೃತ್ವದಲ್ಲಿ 400 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಕರ್ತವ್ಯದಲ್ಲಿ ನಿಯೋಜನೆಗೊಂಡಿದ್ದಾರೆ.

ಮೈದಾನದ ಆವರಣದಲ್ಲಿಯೇ ಉಪನಗರ ಹೊರ ಪೊಲೀಸ್ ಠಾಣೆ ತೆರೆದಿದ್ದು, ಇನ್ಸ್ಪೆಕ್ಟರ್ ಎಂ.ಎಸ್. ಹೂಗಾರ ಅವರಿಗೆ ಉಸ್ತುವಾರಿ ವಹಿಸಲಾಗಿದೆ. ಪೆಂಡಾಲ್ ಪಕ್ಕದಲ್ಲಿಯೇ ಸಿಸಿಟಿವಿ ಕ್ಯಾಮೆರಾ ನಿರ್ವಹಣಾ ಕೇಂದ್ರ ತೆರೆದಿದ್ದು, ಪಿಎಸ್ಐ ನೇತೃತ್ವದಲ್ಲಿ ನಾಲ್ವರು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈದಾನದ ಸುತ್ತ 16 ಸಿಸಿಟಿವಿ ಕ್ಯಾಮೆರಾ ಅಳವಡಿಸಿ ನಿಗಾ ವಹಿಸಲಾಗುತ್ತಿದೆ.

ಗಣೇಶಮೂರ್ತಿ ವಿಸರ್ಜನೆ ಮೆರವಣಿಗೆ ಸಾಗುವ ರಾಣಿಚನ್ನಮ್ಮ ವೃತ್ತ, ಹಳೇಬಸ್ ನಿಲ್ದಾಣ, ಬಸವನ ಮಾರ್ಗ ಹಾಗೂ ಮೂರ್ತಿ ವಿಸರ್ಜನೆಯಾಗುವ ಇಂದಿರಾಗಾಜಿನ ಮನೆ ಆವರಣದ ಹಿಂಭಾಗದ ಬಾವಿ ಬಳಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.